- Advertisement -
www.karnatakatv.net: ಪಂಜಾಬ್ ನ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದು ಹಾಗೇ ರಾಜೀನಾಮೆ ಪತ್ರವನ್ನು ಟ್ವೀಟ್ ಮಾಡಿದ್ದಾರೆ.
ಹೌದು, ಸೋನಿಯಾ ಗಾಂಧಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಸಿಂಗ್ ಸಿಧು ರಾಜೀನಾಮೆ ನೀಡಿದರು ಕೂಡಾ ಪಕ್ಷದಲ್ಲಿ ಮುಂದುವರೆಯುವದಾಗಿ ಹೇಳಿದ್ದಾರೆ. ರಾಜ್ಯದ ಅಭಿವೃದ್ದಿ ವಿಷಯದಲ್ಲಿ ನಾನು ಭಾಗಿಯಾಗುವುದಿಲ್ಲ. ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟರು ನಾನು ಪಕ್ಷದಲ್ಲಿ ದುಡಿಯುವೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿದ ಬಳಿಕ ಮುಖ್ಯ ಮಂತ್ರಿ ಸ್ಥಾನಕ್ಕೆ ನವಜ್ಯೋತ್ ಸಿಂಗ್ ಸಿಧು ಅವರ ಹೆಸರು ಕೂಡಾ ಕೇಳಿ ಬಂದಿತ್ತು. ಆದರೆ ಚರಣ್ಮಿತ್ ಸಿಂಗ್ ಚನ್ನಿ ನೂತನ ಸಿಎಂ ಆಗಿ ಅಧಿಕಾರವನ್ನು ವಹಿಸಿಕೊಂಡಿದ್ದು, ಸಂಪುಟ ವಿಸ್ತರಣೆ ಮಾಡಿದ್ದಾರೆ.
- Advertisement -