Friday, December 5, 2025

Latest Posts

ಸಿದ್ದುಗೆ ಲಜ್ಜೆಗೇಡಿಗಳಾಗಬೇಡಿ ಅಂತ ವ್ಯಂಗ್ಯವಾಡಿದ R. ಅಶೋಕ್!

- Advertisement -

ವಿಪಕ್ಷ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರವಾಗಿ ಟೀಕಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ, ಸ್ವಪಕ್ಷದ ಹಿರಿಯ ಶಾಸಕರ ಭ್ರಷ್ಟಾಚಾರದ ಆರೋಪಗಳು, ಮತ್ತು 40% ಕಮಿಷನ್ ಕುರಿತು ಹಸಿ ವರದಿಗಳ ನಡುವೆಯೂ ಸಿಎಂ ಸ್ಥಾನದಲ್ಲಿ ಮುಂದುವರಿಯುತ್ತಿರುವುದನ್ನು ಅವರು ಲಜ್ಜೆಗೇಡಿತನ ಎಂದು ವಿವರಿಸಿದ್ದಾರೆ.

ಆರ್. ಅಶೋಕ್ ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮತಿಗೇಡಿಯಾಗಬಹುದು, ಆದರೆ ಸಾರ್ವಜನಿಕ ಜೀವನದಲ್ಲಿ, ವಿಶೇಷವಾಗಿ ಅಧಿಕಾರದಲ್ಲಿರುವವರು ಲಜ್ಜೆಗೇಡಿಗಳಾಗಬಾರದು ಎಂದು ಹೇಳಿದ್ದಾರೆ. ಅವರು ವಾಲ್ಮೀಕಿ ನಿಗಮದ ಹಗರಣ ಸಂಬಂಧಿಸಿದಂತೆ, ಸಚಿವರು ಸ್ವತಃ ಭ್ರಷ್ಟಾಚಾರವನ್ನು ಒಪ್ಪಿಕೊಂಡರೂ, ಸಿಎಂ ಅವರು ಅಧಿಕಾರದಲ್ಲಿ ಮುಂದುವರಿಯುತ್ತಿದ್ದಾರೆ ಎಂದು ಅಭಿಪ್ರಾಯ ಪಡಿಸಿದ್ದಾರೆ.

ವಾಲ್ಮೀಕಿ ನಿಗಮದ 87 ಕೋಟಿ ಹಗರಣ, ಸ್ವಪಕ್ಷದ ಶಾಸಕರ ಭ್ರಷ್ಟಾಚಾರದ ಆರೋಪ, ಹಾಗೂ 40% ಕಮಿಷನ್ ಸುಳ್ಳು ವರದಿ ನಡುವೆಯೂ ಸಿಎಂ ಸ್ಥಾನದಲ್ಲಿ ಮುಂದುವರಿಯುತ್ತಿರುವ ಸಿದ್ದರಾಮಯ್ಯನವರ ನಡೆ ಲಜ್ಜೆಗೇಡಿತನ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ಟೀಕೆಗಳ ಬಾಣಗಳನ್ನು ಬಿಟ್ಟಿದ್ದಾರೆ.

‘ಸಿದ್ದರಾಮಯ್ಯನವರೇ ಸ್ವತಃ ನಿಮ್ಮ ಆರ್ಥಿಕ ಸಲಹೆಗಾರರು, ಹಿರಿಯ ಕಾಂಗ್ರೆಸ್ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಎಂದು ಸರ್ಟಿಫಿಕೇಟ್ ಕೊಟ್ಟ ಮೇಲೂ ಮುಖ್ಯಮಂತ್ರಿ ಕುರ್ಚಿಗೆ ಅಂಟಿಕೊಂಡು ಕೂತುಕೊಳ್ಳುವ ಲಜ್ಜೆಗೇಡಿತನಕ್ಕೆ ಏನನ್ನಬೇಕು? ಅಂತ ಪ್ರಶ್ನಿಸಿದ್ದಾರೆ. ಕಳೆದ 2.5 ವರ್ಷಗಳಲ್ಲಿ ನಿಮ್ಮ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಕಮಿಷನ್ ದಾಹಕ್ಕೆ ಬಲಿಯಾದ ಅಧಿಕಾರಿಗಳು, ಗುತ್ತಿಗೆದಾರರ ಪ್ರಕರಣಗಳನ್ನು ಪಟ್ಟಿ ಮಾಡುತ್ತಾ ಹೋದರೆ ಜಾಗವೇ ಸಾಕಾಗುವುದಿಲ್ಲ ಎಂದು ಕಿಡಿಕಾಡಿದ್ದಾರೆ.

ವರದಿ : ಲಾವಣ್ಯ ಅನಿಗೋಳ

- Advertisement -

Latest Posts

Don't Miss