ಗುಜರಾತ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಮಾಜಿ ಅಧ್ಯಕ್ಷ , ಸಂಸದ ರಾಹುಲ್ ಗಾಂಧಿ ಇಂದು ಅಹಮದಾಬಾದ್ ಕೋರ್ಟ್ ಗೆ ಹಾಜರಾಗಲಿದ್ದಾರೆ.
ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕಳೆದ ಏಪ್ರಿಲ್ ನಲ್ಲಿ ಮಧ್ಯಪ್ರದೇಶದಲ್ಲಿ ರಾಹುಲ್ ಗಾಂಧಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೊಲೆ ಪ್ರಕರಣವೊಂದರ ಆರೋಪಿ ಅಂತ ಹೇಳಿಕೆ ನೀಡಿದ್ದರು. 2005ರಲ್ಲಿ ನಡೆದಿದ್ದ ಪಾತಕಿ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್ಕೌಂಟರ್ ಪ್ರಕರಣವನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ ರಾಹುಲ್ ಅಮಿತ್ ಶಾ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಅಂತ ಹೇಳಿದ್ರು. ಇನ್ನು ನಕಲಿ ಎನ್ಕೌಂಟರ್ ಕುರಿತ ಪ್ರಕರಣದ ವಿಚಾರಣೆ ನಡೆಸಿದ್ದ ಬಾಂಬೇ ಹೈಕೋರ್ಟ್ ಅಮಿತ್ ಶಾ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿತ್ತು. ಇನ್ನು ಕೋರ್ಟ್ ತೀರ್ಪು ನೀಡಿದ ಬಳಿಕವೂ ರಾಹುಲ್ ಗಾಂಧಿ ಅಮಿತ್ ಶಾ ವಿರುದ್ಧ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅಹಮದಾಬಾದ್ ಕೋರ್ಟ್ ನಲ್ಲಿ ಬಿಜೆಪಿ ನ್ಯಾಯಾಂಗ ನಿಂದನೆ ಹಾಗೂ ಮಾನನಷ್ಟ ಪ್ರಕರಣ ದಾಖಲಿಸಿತ್ತು. ಹೀಗಾಗಿ ಇಂದು ರಾಹುಲ್ ಗಾಂಧಿ ಕೋರ್ಟ್ ಗೆ ಹಾಜರಾಗಲಿದ್ದಾರೆ. ಇನ್ನು ಈ ಮೂಲಕ ಕಳೆದ ಒಂದು ತಿಂಗಳಲ್ಲಿ ರಾಹುಲ್ ಗಾಂಧಿ 4ನೇ ಬಾರಿಗೆ ಕೋರ್ಟ್ ಕಟಕಟೆ ಹತ್ತಿದಂತಾಗಲಿದೆ.
ಸುಪ್ರೀಂ ಕೋರ್ಟ್ ನಲ್ಲಿ ಕನ್ನಡ ಕಹಳೆ..!ಮಿಸ್ ಮಾಡದೇ ಈ ವಿಡಿಯೋ ನೋಡಿ