ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬ್ರಿಟನ್ ಪೌರತ್ವ ಹೊಂದಿದ್ದಾರೆಂಬ ಆರೋಪ ಪ್ರಕರಣದಲ್ಲಿ, ಇ.ಡಿ. ನೋಟಿಸ್ ಜಾರಿ ಮಾಡಿದೆ. ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದ ಕರ್ನಾಟಕದ ಬಿಜೆಪಿ ಕಾರ್ಯಕರ್ತ ವಿಘ್ನೇಶ್ ಶಿಶಿರ್‌ಗೆ, ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.
ರಾಹುಲ್ ಗಾಂಧಿ ಬ್ರಿಟನ್ ಪೌರತ್ವ ಹೊಂದಿದ್ದಾರೆಂದು ಸಲ್ಲಿಸಿದ್ದ ಅರ್ಜಿಯಲ್ಲಿ, ತಮ್ಮ ಬಳಿ ಬ್ರಿಟನ್ ಸರ್ಕಾರದಿಂದ ಬಂದ ಇಮೇಲ್ ಮಾಹಿತಿ ಹಾಗೂ ಸಂಬಂಧಿತ ದಾಖಲೆಗಳಿವೆ ಎಂದು ತಿಳಿಸಿದ್ದಾರೆ. ಬ್ರಿಟನ್ ಪ್ರಜೆಯಾದ ಕಾರಣ, ರಾಹುಲ್ ಗಾಂಧಿ ಭಾರತದ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಲ್ಲ ಎಂದು ಆರೋಪಿಸಿದ್ದಾರೆ.
ಈ ಅರ್ಜಿಯ ಕುರಿತು ಆಗಸ್ಟ್ 30ರಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿ, ಪ್ರಕರಣದ ವಿಚಾರಣೆಗೆ ಅರ್ಹವಾಗಿದೆ ಅಂತಾ ಅಭಿಪ್ರಾಯಪಟ್ಟಿತ್ತು. ಜೊತೆಗೆ ಶಿಶಿರ್‌ಗೆ 24 ಗಂಟೆಗಳ ಭದ್ರತೆ ಒದಗಿಸುವಂತೆ ಸೂಚಿಸಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದೆ. ಫೆಮಾ ಕಾಯ್ದೆ ಉಲ್ಲಂಘನೆಯ ಆರೋಪವೂ ಇರುವುದರಿಂದ ಇ.ಡಿ. ಪ್ರತ್ಯೇಕವಾಗಿ ತನಿಖೆ ಆರಂಭಿಸಿದೆ. ಶಿಶಿರ್ ತಮ್ಮ ಆರೋಪವನ್ನು ದೃಢೀಕರಿಸುವ ದಾಖಲೆಗಳೊಂದಿಗೆ, ಸೆಪ್ಟೆಂಬರ್ 9ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ