- Advertisement -
National News:
ಭಾರತ್ ಜೋಡೋ ಯಾತ್ರೆ ಮುಕ್ತಾಯದ ಹಂತದಲ್ಲಿರುವಂತೆ, ಜನರ ಸಮಸ್ಯೆಗಳನ್ನು ಈಡೇರಿಸುವ ಬಗ್ಗೆ ಭರವಸೆ ನೀಡಿ ಪತ್ರ ಬರೆದಿರುವ ರಾಹುಲ್ ಗಾಂಧಿ , ಜನರ ದೈನಂದಿನ ಜೀವನಕ್ಕೆ ಬೇಕಾಗುವ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್, ಉದ್ಯೋಗದ ಕುರಿತು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಜನವರಿ 30ರಂದು ಭಾರತ್ ಜೋಡೋ ಯಾತ್ರೆ ಸಮಾಪನಗೊಳ್ಳಲಿದೆ. ಜನವರಿ 26ರಿಂದಲೇ ಕೇಂದ್ರದ ವಿರುದ್ದ ಚಾರ್ಜ್‌ಶೀಟ್ ಜೊತೆಗೆ ರಾಹುಲ್ ಗಾಂಧಿ ಜನರಿಗೆ ಬರೆದ ಪತ್ರವನ್ನು ಮನೆಮನೆಗೆ ತಲುಪಿಸುವುದಾಗಿ ಕಾಂಗ್ರೆಸ್ ಹೇಳಿದೆ. ಆಪ್ಕಾ ಅಪ್ನಾ ರಾಹುಲ್ ಎಂದು ಪತ್ರಕ್ಕೆ ಸಹಿ ಹಾಕಲಾಗಿದ್ದು, ಎಲ್ಲಾ ಪ್ರಾದೇಶಿಕ ಭಾಷೆಗಳಲ್ಲಿಯೂ ಪತ್ರ ಬರೆಯಲಾಗಿದೆ .ಕೇವಲ 500 ರೂ.ಗಳಿಗೆ ಗ್ಯಾಸ್ ಸಿಲಿಂಡರ್, ಅಗ್ಗವಾದ ಬೆಲೆಗೆ ಪೆಟ್ರೋಲ್, ಡೀಸೆಲ್, ಉದ್ಯೋಗ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
- Advertisement -