ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ಹಾಗೂ ರಾಯ್ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ದೆಹಲಿಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಿಂದ ಇಂಡಿಯಾ ಬ್ಲಾಕ್‌ನ ಫ್ಲೋರ್ ಲೀಡರ್‌ಗಳ ಸಭೆಯಲ್ಲಿ ಪಾಲ್ಗೊಂಡ ಬಳಿಕ ಇದೀಗ ನಿರ್ಗಮಿಸಿದ್ದಾರೆ. ಬುಧವಾರ ಲೋಕಸಭೆ ಸ್ಪೀಕರ್ ಚುನಾವಣೆ ನಡೆಯಲಿದೆ. ಇದರ ಬೆನ್ನಲ್ಲೇ ವಿರೋಧ ಪಕ್ಷದ ನಾಯಕನ್ನಾಗಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.ಮೋದಿ ಮೊದಲ ಅವಧಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಎರಡನೇ ಅವಧಿಯಲ್ಲಿ ಅಧಿರಂಜನ್ ಚೌಧರಿ ಲೋಕಸಭೆಯ ವಿಪಕ್ಷ ನಾಯಕನಾಗಿ ಆಯ್ಕೆ ಆಗಿದ್ದರು.
ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಅವರು, “ಗೌರವಾನ್ವಿತ ಸಿಪಿಪಿ ಅಧ್ಯಕ್ಷರು ನಾಲ್ಕು ಬಾರಿ ಸ್ಪೀಕರ್ ಬರಿ ಮೋಬ್ ಅವರಿಗೆ ಪತ್ರ ಬರೆದು ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ನೇಮಕ ಮಾಡುವ ನಿರ್ಧಾರವನ್ನು ತಿಳಿಸಿದ್ದಾರೆ, ಇತರ ಪದಾಧಿಕಾರಿಗಳನ್ನು ನಂತರ ನಿರ್ಧರಿಸಲಾಗುವುದು ಎಂದಿದ್ದಾರೆ.