Tuesday, April 15, 2025

Latest Posts

Rahul Gandhi : ರಾಜ್ಯ ನಾಯಕರನ್ನು ತರಾಟೆಗೆ ತೆಗೆದುಕೊಂಡ ರಾಗಾ..?!

- Advertisement -

Dehali News : ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ಆಗಸ್ಟ್ 2 ಬುಧವಾರದಂದು ನಡೆದಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ನಾಯಕರ ಸಭೆ ನಡೆಯಿತು.

ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕರ್ನಾಟಕದ ಮಂತ್ರಿಗಳು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಮತ್ತಿತರರು ಭಾಗವಹಿಸಿದ್ದರು.

ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮ್ಮುಖದಲ್ಲೇ ರಾಜ್ಯ ನಾಯಕರನ್ನು ರಾಹುಲ್ ಗಾಂಧಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಬಿಜೆಪಿ ವಿರುದ್ಧ ನಾವು ಭ್ರಷ್ಟಾಚಾರದ ಆರೋಪ ಮಾಡಿದ್ದೆವು. ಈಗ ನಮ್ಮ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಬಂದರೆ ಹೇಗೆ? ನಾವು ಭ್ರಷ್ಟಾಚಾರದ ಆರೋಪವನ್ನು ಸಹಿಸಲು ಸಾಧ್ಯವೇ ಇಲ್ಲ. ಈ ಬಗ್ಗೆ ಎಚ್ಚರಿಕೆಯಿಂದ ಕೆಲಸ ಮಾಡಿ ಎಂದು ರಾಜ್ಯ ನಾಯಕರಿಗೆ ರಾಹುಲ್ ಗಾಂಧಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಅದೆಂತಹ ದೊಡ್ಡ ನಾಯಕರೇ ಇರಲಿ, ಭ್ರಷ್ಟಾಚಾರ ವಿಚಾರದಲ್ಲಿ ಸಹಿಸಿಕೊಳ್ಳಲ್ಲ. ನಾಯಕರು, ಕಾರ್ಯಕರ್ತರು ಪಕ್ಷದಿಂದ ಅಂತರ ಕಾಯ್ದುಕೊಳ್ಳಬಾರದು. ನನಗೆ ಪಕ್ಷದ ಕಾರ್ಯಕರ್ತರೇ ಮುಖ್ಯ. ನಾನು ಮತ್ತೊಬ್ಬರನ್ನು ಸಚಿವರನ್ನಾಗಿಸಬಹುದು. ಆದರೆ ಮತ್ತೊಬ್ಬ ಕಾರ್ಯಕರ್ತರನ್ನು ಕರೆತರಲಾರೆ. ಹೀಗಾಗಿ ಕಾರ್ಯಕರ್ತರನ್ನು ಸಹಿಸದ ಸಚಿವ ನಮಗೂ ಬೇಡ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

DK Shivakumar : “ಇಂಡಿಯಾ”ಗೆ ಕನಿಷ್ಟ 20 ಲೋಕಸಭೆ ಸೀಟುಗಳನ್ನು ಗೆಲ್ಲಿಸಿ ಕೊಡುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್

AnnaMalai : ಮಾಜಿ ಸೈನಿಕನ ಮನೆಗೆ ಅಣ್ಣಾಮಲೈ ಭೇಟಿ…!

New Born Baby : ಗಣಪತಿ ದೇವರ ಹೋಲುವ ಮಗು ಜನನ…! ದೇವರೆಂದು ಆಸ್ಪತ್ರೆಗೆ ಧಾವಿಸಿದ ಜನ..?!

 

- Advertisement -

Latest Posts

Don't Miss