Wednesday, June 12, 2024

Latest Posts

ಇಂದು ಬೆಂಗಳೂರಿಗೆ ರಾಹುಲ್- ಪ್ರಿಯಾಂಕಾ ನಾಳೆ ವಯನಾಡಿಗೆ ರಾಹುಲ್ ಭೇಟಿ

- Advertisement -

Political News: ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್ ಹಾಗೂ ಪ್ರಿಯಾಂಕಾ, ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಇಬ್ಬರೂ ನಾಯಕರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಬರಮಾಡಿಕೊಳ್ಳಲಿದ್ದಾರೆ.

ಬೆಂಗಳೂರಿನಲ್ಲಿ ಯಾವುದೇ ಕಾರ್ಯಕ್ರಮಗಳು ಇಲ್ಲ. ಆದರೆ, ಮತದಾರರಿಗೆ ಕೃತಜ್ಞತೆ ಅರ್ಪಿಸುವ ಸಲುವಾಗಿ ನಾಳೆ ಕೇರಳದ ವಯನಾಡ್​​​ಗೆ ತೆರಳಲಿರುವ ಅವರು ಮಾರ್ಗ ಮಧ್ಯೆ ಬೆಂಗಳೂರು ವಿಮಾನ ನಿಲ್ದಾಣ ಬಳಿ ಖಾಸಗಿ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಮಲಪ್ಪುರಂ ಜಿಲ್ಲೆ ಹಾಗೂ ಕಲ್ಪಟ್ಟಾದಲ್ಲಿ ರಾಹುಲ್ ಹಾಗೂ ಪ್ರಿಯಾಂಕಾ ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸಲಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ವಯನಾಡು ಹಾಗೂ ರಾಯ್ ಬರೇಲಿ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ರಾಹುಲ್, ಯಾವುದಾದರೂ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಬೇಕಾಗಿದೆ. ಮೂಲಗಳ ಪ್ರಕಾರ ಕಾಂಗ್ರೆಸ್​ನ ಭದ್ರಕೋಟೆಯಾಗಿರುವ ರಾಯ್ ಬರೇಲಿಯನ್ನು ಉಳಿಸಿಕೊಳ್ಳಲಿದ್ದು, ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ವಯನಾಡು ಕ್ಷೇತ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ರಾಹುಲ್ ಗಾಂಧಿ 3.6 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹೀಗಾಗಿ ವಿಜಯೋತ್ಸವ ಆಚರಿಸಲು ಸಿದ್ಧತೆ ನಡೆಸಲಾಗಿದೆ. 2019 ರಲ್ಲಿ ರಾಹುಲ್ ಈ ಕ್ಷೇತ್ರದಲ್ಲಿ 4.3 ಲಕ್ಷ ಮತಗಳ ದಾಖಲೆಯ ಅಂತರದಿಂದ ಗೆಲುವು ಸಾಧಿಸಿದ್ದರು. ಉತ್ತರ ಪ್ರದೇಸದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಮುಂದಾಗಿರುವ ರಾಹುಲ್, ರಾಯ್ ಬರೇಲಿಯನ್ನು ಉಳಿಸಿಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.

Sandalwood News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಕಾರಣ, ರೇಣುಕಾಸ್ವಾಮಿಯ ಕೊ*ಲೆ..?

ಮೋದಿ ಕ್ಯಾಬಿನೆಟ್ 3.0: ಯಾರಿಗೆ ಯಾವ ಖಾತೆ?

- Advertisement -

Latest Posts

Don't Miss