ಹುಬ್ಬಳ್ಳಿ: ಮಾನನಷ್ಟ ಮೊಕದ್ದಮೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದಕ್ಕೆ ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ಸಂತಸ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಗ್ರಾಮೀಣ ಕಾಂಗ್ರೆಸ್ ಸಹಯೋಗದೊಂದಿಗೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ವಿಜಯೋತ್ಸವ ಆಚರಣೆ ಮಾಡಲಾಯಿತು.
ಹುಬ್ಬಳ್ಳಿಯ ಹೃದಯ ಭಾಗದಲ್ಲಿ ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ಕಾರ್ಯಕರ್ತರು, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಅಲ್ಲದೇ ಪರಸ್ಪರ ಸಿಹಿ ತಿನಿಸಿ ರಾಹುಲ್ ಗಾಂಧಿಗೆ ಶುಭ ಹಾರೈಸಿದರು. ಇದು ಪ್ರಜಾಪ್ರಭುತ್ವದ ಗೆಲುವು ಎಂದು ಕಾಂಗ್ರೆಸ್ ನಾಯಕರು ಬಣ್ಣಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಕುರಿತು ಅಭಿನಂದನೆ ಸಲ್ಲಿಸಿರುವ ಕೈ ನಾಯಕರು, ಸುಪ್ರೀಂ ಕೋರ್ಟ್‌ನಿಂದ ರಾಹುಲ್ ಗಾಂಧಿಯವರಿಗೆ ನ್ಯಾಯ ದೊರಕಿದೆ. ಇದು ಪ್ರಜಾಪ್ರಭುತ್ವಕ್ಕೆ ಸಿಕ್ಕಿರುವ ಜಯ. ನೆಲದ ಕಾನೂನನ್ನು ಎಲ್ಲರೂ ಗೌರವಿಸಬೇಕು. ಆ ಕೆಲಸವನ್ನು ಸುಪ್ರೀಂ ಕೋರ್ಟ್ ಮಾಡಿದೆ ಎಂದು ಕಾಂಗ್ರೆಸ್ ಮುಖಂಡರು ಸಂಭ್ರಮಿಸಿದರು.
Sachin Kumar : ರಾಮನಗರ ಜಿಲ್ಲೆ ಹೊರವಲಯದಲ್ಲಿ ಕಚ್ಚಾ ಬಾಂಬ್ ಸ್ಪೋಟ…!
Advertisement: ಆರೋ ಜಾಹಿರಾತಿನಲ್ಲಿ ನಿರ್ದೇಶಕನ ಪಾತ್ರದಲ್ಲಿ ಹೃತಿಕ್ ರೋಷನ್