www.karnatakatv.net: ಲಾಕ್ ಡೌನ್ ಬಳಿಕ ಮತ್ತೆ ಆರಂಭವಾಗಿರುವ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ರಾಯಚೂರು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಸಿಂಧನೂರಿನ ತಿಪ್ಪನಹಟ್ಟಿಯಲ್ಲಿ ಗ್ರಾಮ ವಾಸ್ತವ್ಯ ನಡೆಸಿದ್ದಾರೆ.
ಮಧ್ಯಾಹ್ನದವರೆಗೆ ಕಂದಾಯ ಇಲಾಖೆಯ ಸಮಸ್ಯೆ ಸೇರಿದಂತೆ ವಯಕ್ತಿಕ ಸಮಸ್ಯೆಗಳ 36 ಅರ್ಜಿಗಳನ್ನ ಡಿಸಿ ಸ್ವೀಕರಿಸಿದ್ದಾರೆ. ಜಿಲ್ಲೆಯ ಏಳು ತಾಲೂಕಿನಲ್ಲೂ ಎರಡನೇ ಬಾರಿಗೆ ಗ್ರಾಮ ವಾಸ್ತವ್ಯವನ್ನು ಜಿಲ್ಲಾಧಿಕಾರಿ ಸತೀಶ್ ನಡೆಸಿದ್ದಾರೆ. ಈ ವೇಳೆ ಗ್ರಾಮಸ್ಥರು ವಿವಿಧ ರಸ್ತೆ, ಕುಡಿಯುವ ನೀರು, ವಿದ್ಯುತ್ ಸೇರಿ ವಿವಿಧ ಸಮಸ್ಯೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೆದುರು ತಮ್ಮ ಅಳಲು ತೋಡಿಕೊಂಡರು.
ಇನ್ನು ಈ ವೇಳೆ ಸಿಂಧನೂರು ತಾಲೂಕಿನ ದೇವರಗುಡಿ ಗ್ರಾಮದ ವಿದ್ಯಾರ್ಥಿಗಳು ತಮ್ಮ ಗ್ರಾಮದ ಹಳ್ಳಕ್ಕೆ ಸೇತುವೆ ನಿರ್ಮಿಸಿಕೊಡಿ ಅಂತ ಮನವಿ ಮಾಡಿದ್ರು. ನೀರಿನಲ್ಲಿ ಹಳ್ಳದಾಟಿ ವಿದ್ಯಾರ್ಥಿಗಳು ಶಾಲೆಗೆ ಹೋಗುವ ಪರಿಸ್ಥಿತಿ ಇದ್ದು, ನೂತನ ಸೇತುವೆ ನಿರ್ಮಾಣ ಮಾಡಿ ಅಂತ ಗ್ರಾಮಸ್ಥರು ಡಿಸಿಗೆ ಮನವಿ ಸಲ್ಲಿಸಿದರು.
ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಹಾಗೂ ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ಈಗಾಗಲೇ ಸೇತುವೆಗೆ 3 ಕೋಟಿ ಬಿಡುಗಡೆಯಾಗಿದ್ದು ಶೀಘ್ರದಲ್ಲೇ ಗುತ್ತಿಗೆ ಪ್ರಕ್ರಿಯೆ ಆರಂಭವಾಗುವುದು ಅಂತ ತಿಳಿಸಿದ್ದಾರೆ.
ಅನಿಲ್ ಕುಮಾರ್, ಕರ್ನಾಟಕ ಟಿವಿ- ರಾಯಚೂರು