ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದ ಬೆನ್ನಲ್ಲೆ , ರಾಯಚೂರು ಸಂಯುಕ್ತ ಕಿಸಾನ್ ಹೋರಾಟ ಸಮಿತಿಯಿಂದ ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಬೆಳೆಹಾನಿ ವಿವಿದ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಯನ್ನು ನಡೆಸಿದರು .
ರೈತ ಮುಖಂಡ ಚಾಮರಸ ಪಾಟೀಲ್ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗಿಯಾಗಿದ್ದರು , ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಕೇಂದ್ರ ಸರ್ಕಾರ ನಮ್ಮ ವಿವಿದ ಬೇಡಿಕೆಗಳನ್ನು ಈಡೇರಿಸಬೇಕೆಂದು ಘೋಷಣೆಗಳನ್ನು ಕೂಗಿದರು, ಇನ್ನು ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಚಾಮರಸ ಪಾಟೀಲ್ ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದೆ. ಆದರೆ ರೈತರಿಗೆ ಎಂಎಸಪಿ ಕನಿಷ್ಟ ಬೆಲೆಯನ್ನು ಎಲ್ಲಾ ಮುಕ್ತ ಮಾರುಕಟ್ಟೆಗಳಲ್ಲಿ ಜಾರಿಗೊಳಿಸಬೇಕು ,
ಮತ್ತು ಕಾನೂನಿನ ಚೌಕಟ್ಟಿನಲ್ಲಿ ತರಬೇಕು ,ಎಪಿಎಂಸಿ ಹಾಗು ಗೋಹತ್ಯೆ ಕಾಯ್ದೆಗಳನ್ನು ಹಿಂಪಡೆಯಬೇಕೆoದು ಕೇಂದ್ರ ಸರ್ಕಾರದ ವಿರುದ್ದ ಹರಿಹಾಯ್ದರು .
ರಾಷ್ಟ್ರೀಯ ಹೆದ್ದಾರಿಯನ್ನು ತಡೆದ ಹಿನ್ನಲೆ ರಸ್ತೆ ಸಂಚಾರಕ್ಕೆ ಸಂಪೂರ್ಣ ಅಡ್ಡಿಯಾದ ಘಟನೆ ಜರುಗಿತು .
ಇನ್ನೂ ಯಾವುದೆ ಅಹಿತಕರ ಘಟನೆ ಜರುಗದಂತೆ ಪೋಲೀಸರು ಸರ್ಪಗಾವಲು ಹಾಕಿದರು . ಇದರ ಮಧ್ಯೆಯೇ ಅನ್ನದಾತರು ರಸ್ತೆ ತಡೆ ನಡೆಸಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳ ವಿರುದ್ದ ಘೋಷಣೆ ಕೂಗಿದರು .
ಕೇಂದ್ರ ಸರ್ಕಾರ ವಿವಿಧ ಬೇಡಿಕೆ ಈಡೇರಿಸುವಂತೆ ರಾಯಚೂರು ರೈತರಿಂದ ಪ್ರತಿಭಟನೆ :
- Advertisement -
- Advertisement -