Wednesday, June 19, 2024

Latest Posts

Raichur : MES ನಿಷೇಧಿಸುವಂತೆ ಕರವೇ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ..!

- Advertisement -

ರಾಯಚೂರು : ನಾಡಧ್ವಜ ಸುಟ್ಟಿರುವ ಮತ್ತು  ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಧ್ವಂಸಗೊಳಿಸಿರುವುದರ ಜೊತೆಗೆ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಸಗಣಿ ಬಳಿದು ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿ ರುವ ದುಷ್ಕರ್ಮಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಮತ್ತು MES ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ವಿನೋದ್ ರೆಡ್ಡಿರವರ ನೇತೃತ್ವದಲ್ಲಿ ನಗರದ ಬಸವೇಶ್ವರ ವೃತ್ತದಿಂದ ನಾಡದ್ರೋಹಿಗಳ ವಿರುದ್ಧ ಘೋಷಣೆ ಕೂಗುತ್ತಾ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಮೆರವಣಿಗೆಯನ್ನು ಕೈಗೊಂಡಿದ್ದರು. ಈ ಮೂಲಕ ಮೆರವಣಿಗೆಯಲ್ಲಿ ಬೇಕೇ ಬೇಕು ನ್ಯಾಯ ಬೇಕು, ನಮ್ಮದು ನಮ್ಮದು  ಬೆಳಗಾವಿ ನಮ್ಮದು, ಹಾಗೂ ಎಂಇಎಸ್ ಸಂಘಟನೆ ನಿಷೇಧಿಸುವಂತೆ ಘೋಷಣೆಗಳನ್ನು ಕೂಗುತ್ತಾ ಸರ್ಕಾರಕ್ಕೆ ಧಿಕ್ಕಾರ ಹಾಕುತ್ತ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.              

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಕರವೇ ಜಿಲ್ಲಾಧ್ಯಕ್ಷ ವಿನೋದ್ ರೆಡ್ಡಿ ನಮ್ಮ ಸಂಘಟನೆಯ ರಾಜ್ಯಾಧ್ಯಕ್ಷರಾದ ಟಿ ಎನ್ ನಾರಾಯಣಗೌಡ ಆದೇಶದಂತೆ ಕರ್ನಾಟಕ ರಕ್ಷಣಾ ವೇದಿಕೆ ರಾಯಚೂರು ಜಿಲ್ಲಾ ಘಟಕವು ಬೆಳಗಾವಿಯಲ್ಲಿನ ಸಂಗೊಳ್ಳಿರಾಯಣ್ಣನ ಪುತ್ಥಳಿ ದ್ವಂಸ ಹಾಗೂ ಬಸವಣ್ಣನವರ ಭಾವಚಿತ್ರಕ್ಕೆ ಸಗಣಿ ಬಳಿದಿರುವ MES ಪುಂಡರನ್ನು ಗುಂಡ ಕಾಯ್ದೆ ಅಡಿ ಗಡಿಪಾರು ಮಾಡಬೇಕು  ಹಾಗೂ ಎಂಇಎಸ್ ಸಂಘಟನೆಯನ್ನ ಈ ಕೂಡಲೇ ರಾಜ್ಯದಲ್ಲಿ ನಿಷೇಧಿಸಬೇಕು ಎಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವುದರ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.        

                                                    ಅನಿಲ್, ಕರ್ನಾಟಕ ಟಿವಿ, ರಾಯಚೂರು.

- Advertisement -

Latest Posts

Don't Miss