Saturday, July 5, 2025

Latest Posts

ವಿಡಿಯೋ ಕಾನ್ಫರೆನ್ಸ್ ಮೂಲಕ ರೈಲ್ವೆ ಯೊಜನೆಯ ಉದ್ಫಾಟನೆ

- Advertisement -

ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನಲ್ಲಿ ಇಂದು ಅನೇಕ ಪ್ರಮುಖ ರೈಲ್ವೆ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ಈ ವೇಳೆ ಗುಜರಾತಿನ  ವಿಜ್ಞಾನ ನಗರಿಯಲ್ಲಿ ‘ಅಕ್ವಾಟಿಕ್ಸ್ ಮತ್ತು ರೊಬೊಟಿಕ್ಸ್ ಗ್ಯಾಲರಿ’ ಮತ್ತು ‘ನಿಸರ್ಗ ಉದ್ಯಾನ’ವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಹೊಸದಾಗಿ ಪುನರ್ ಅಭಿವೃದ್ಧಿಪಡಿಸಿರುವ ಗಾಂಧಿ ನಗರ ರಾಜಧಾನಿ ರೈಲು ನಿಲ್ದಾಣ, ಹೊಸದಾಗಿ ವಿದ್ಯುದೀಕರಿಸಿರುವ ಸುರೇಂದ್ರನಗರ-ಪಿಪವಾವ್ ರೈಲು ಮಾರ್ಗವನ್ನು ಪ್ರಧಾನಿ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಮಹೆಸಾನ-ವರೇಥಾ ರೈಲು ಮಾರ್ಗ ಮತ್ತು. ಗಾಂಧಿನಗರ ರಾಜಧಾನಿ-ವಾರಾಣಸಿ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಮತ್ತು ಗಾಂಧಿನಗರ ರಾಜಧಾನಿ-ವರೇಥಾ ನಡುವೆ ಮೆಮು ರೈಲು ಸೇವೆಗೆ ನರೇಂದ್ರ ಮೋದಿ ಅವರು ಹಸಿರು ನಿಶಾನೆ ತೋರಿಸಲಿದ್ದಾರೆ.

- Advertisement -

Latest Posts

Don't Miss