ಭೀಕರ ಪ್ರವಾಹಕ್ಕೆ ತುತ್ತಾಗಿರುವ ಕರ್ನಾಟಕಕ್ಕೆ ನೆರವು ಬೇಕಾಗಿದೆ. ಸದ್ಯ ರಾಜ್ಯದಾದ್ಯಂತ ಹಲವು ಕಡೆಗಳಿಂದ ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಈ ನಡುವೆ ರೈಲ್ವೆ ಇಲಾಖೆ ಕೂಡ ಪ್ರವಾಹ ಪೀಡಿತ ಕರ್ನಾಟಕ, ಕೇರಳ, ಮಹಾರಾಷ್ಟ್ರಗಳ ನೆರವಿಗೆ ಮುಂದಾಗಿದೆ. ದೇಶದ ಯಾವುದೇ ಭಾಗದಿಂದ ಪ್ರವಾಹ ಪೀಡಿತ ಪ್ರದೇಶಗಳಿಗೆ ಬರುವ ಯಾವುದೇ ಪರಿಹಾರ ಸಾಮಗ್ರಿಗಳಿಗೆ ಯಾವುದೇ ಸರಕು ಶುಲ್ಕ ವಿಧಿಸದಿರಲು ನಿರ್ಧರಿಸಿದೆ.
ಈ ಬಗ್ಗೆ ಕೇಂದ್ರ ರೈಲ್ವೆ ಸಚಿವರಾದ ಪಿಯೂಷ್ ಗೋಯಲ್ ಟ್ವಿಟ್ಟರ್ ನಲ್ಲಿ ಪೋಸ್ಟ್ ಒಂದನ್ನ ಹಂಚಿಕೊಂಡಿದ್ದು, ಈ ರೀತಿ ಬರೆದಿದ್ದಾರೆ. “ಪ್ರವಾಹ ಪೀಡಿತ ರಾಜ್ಯಗಳಾದ ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರಗಳಿಗೆ ಕಳುಹಿಸುವ ಪರಿಹಾರ ಸಾಮಗ್ರಿಗಳಿಗೆ ಯಾವುದೇ ಸರಕು ಶುಲ್ಕ ವಿಧಿಸಲಾಗುವುದಿಲ್ಲ ಎಂದು ರೈಲ್ವೆ ಪ್ರಕಟಿಸಿದೆ. ಈ ಪ್ರಯತ್ನದಲ್ಲಿ ನಮಗೆ ಸಹಾಯ ಮಾಡಲು ಮತ್ತು ಸಾಧ್ಯವಾದಷ್ಟು ಪರಿಹಾರ ಸಾಮಗ್ರಿಗಳನ್ನು ಕಳುಹಿಸಲು ನಾವು ನಿಮ್ಮನ್ನು ಒತ್ತಾಯಿಸುತ್ತೇವೆ, ಅದನ್ನು ನಾವು ಉಚಿತವಾಗಿ ಸಾಗಿಸುತ್ತೇವೆ. ಎಂದಿದ್ದಾರೆ.