Rain Alert: ಕರ್ನಾಟಕದಲ್ಲಿ ಮಳೆಯ ರೌದ್ರನರ್ತನ! ಯಾವ ಜಿಲೆಗಳಿಗೆ ಯೆಲ್ಲೋ ಅಲರ್ಟ್?

Rain Alert: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬಲವಾದ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

ಇದರ ಜೊತೆಗೆ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಸಮುದ್ರ ತೀರ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಪ್ರವಾಹದ ಸಾಧ್ಯತೆ ಇರುವ ಪ್ರದೇಶಗಳಲ್ಲಿಯೂ ಸ್ಥಳೀಯ ಆಡಳಿತ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮುಂಗಾರು ಚುರುಕಾಗಿರಲಿದೆ. ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇರುವುದರಿಂದ, ಹವಾಮಾನ ಇಲಾಖೆಯ ಎಚ್ಚರಿಕೆಗಳನ್ನು ಪಾಲಿಸಿ ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ತಪ್ಪಿಸಿ, ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಮನವಿ ಮಾಡಲಾಗಿದೆ.

About The Author