ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ‘ನವ ವಸಂತ ಯುವಸಂಭ್ರಮ’ ಕಾರ್ಯಕ್ರಮಕ್ಕೆ ನಿನ್ನೆ ರಾತ್ರಿ ಸುರಿದ ಭಾರಿ ಮಳೆ ಹಾಗೂ ಬಿರುಗಾಳಿ ಅಡ್ಡಿಯಾಗಿದ್ದು, ಕಾರ್ಯಕ್ರಮಕ್ಕೆ ನಿರ್ಮಿಸಿದ್ದ ಬೃಹತ್ ವೇದಿಕೆ ಪೆಂಡಾಲ್ ಸಂಪೂರ್ಣವಾಗಿ ನೆಲಸಮವಾಗಿದ್ದು. ಯುವ ಸಂಭ್ರಮಕ್ಕೆ ಮಳೆ ಬ್ರೇಕ್ ಹಾಕಿದೆ.
ಏಪ್ರಿಲ್ 29ರ ರಾತ್ರಿ ರಾಜ್ಯದ ಹಲವೆಡೆ ಮಳೆಯ ಅಬ್ಬರದ ನಡುವೆ ಮಂಡ್ಯದಲ್ಲಿಯೂ ತೀವ್ರ ಗಾಳಿ ಸಹಿತ ಮಳೆ ಸುರಿದಿದ್ದು, ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಈ ನಡುವೆ ವಿಶ್ವವಿದ್ಯಾನಿಲಯದಲ್ಲಿ ನಡೆಯಬೇಕಿದ್ದ ಯುವಸಂಭ್ರಮ ಕಾರ್ಯಕ್ರಮದ ಸಿದ್ಧತೆಗಳು ಮಳೆಯ ಹೊಡೆತಕ್ಕೆ ಎಲ್ಲಾ ನೆಲಕ್ಕಂಟಿವೆ.
ಬಿರುಗಾಳಿಯ ತೀವ್ರತೆಗೆ ಕಾರ್ಯಕ್ರಮಕ್ಕಾಗಿ ನಿರ್ಮಿಸಿದ್ದ ವೇದಿಕೆ ಹಾಗೂ ಪೆಂಡಾಲ್ ಸಂಪೂರ್ಣವಾಗಿ ನೆಲಸಮವಾಗಿದ್ದು, ಕಾರ್ಯಕ್ರಮವನ್ನು ತಕ್ಷಣ ರದ್ದುಪಡಿಸುವ ಅನಿವಾರ್ಯತೆ ಎದುರಾಗಿದೆ.
ಘಟನೆ ನಂತರ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ರವಿ ಗಣಿಗ ಅವರು ಪರಿಸ್ಥಿತಿಯನ್ನು ಪರಿಶೀಲಿಸಿ, ವಿದ್ಯಾರ್ಥಿಗಳ ನಿರೀಕ್ಷೆಗೆ ತಕ್ಕಂತೆ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಮರುನಿರ್ದೇಶಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಸದ್ಯಕ್ಕೆ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.




