Belagavi News : ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಬೆಳಗಾವಿ ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶವಾದ ಖಾನಾಪುರ ತಾಲ್ಲೂಕಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕಾಡಂಚಿನ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದೆ. ಮಲಪ್ರಭಾ ನದಿ ಪಕ್ಕದಲ್ಲಿರುವ ಹಬ್ಬಾನಟ್ಟಿ ಮಾರುತಿ ಮಂದಿರ ನೀರಿನಿಂದ ಆವೃತಗೊಂಡಿದೆ. ಘಟಪ್ರಭಾ ಜಲಾಶಯದ ಹಿನ್ನೀರಿನಲ್ಲಿರುವ ವಿಠ್ಠಲ- ರುಕ್ಮಿಣಿ ಮಂದಿರ ಜಲಾವೃತಗೊಂಡಿದೆ.
ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ದಾರೋಳಿ-ಮೋದೆಕೊಪ್ಪ, ಕುಸಮಳಿ- ಜಾಂಬೋಟಿ, ಅಸೋಗಾ-ಭೋಸಗಾಳಿ, ಅಮಟೆ-ಗೋಲ್ಯಾಳಿ, ಲೋಂಡಾ- ವರ್ಕಡ, ಹೆಮ್ಮಡಗಾ-ತಳೇವಾಡಿ, ನೇರಸಾ-ಕೊಂಗಳಾ, ಗವ್ವಾಳಿ, ಅಬನಾಳಿ-ಡೊಂಗರಗಾಂವ, ಶಿರೋಲಿ- ತಿವೋಲಿ, ಚಿಕಲೆ-ಅಮಗಾಂವ, ಮೋದೆಕೊಪ್ಪ-ಕೌಲಾಪುರ ಗ್ರಾಮಗಳ ನಡುವಿನ ಸೇತುವೆಗಳ ಮೇಲೆ ನೀರು ಹರಿಯುತ್ತಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.
Bengalore university: ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ ಬೆಳ್ತಂಗಡಿ ಮೂಲದ ಶೇಕ್ ಲತೀಫ್ ನೇಮಕ