Friday, September 12, 2025

Latest Posts

ರಾಜ್ಯದಲ್ಲಿ ಮಳೆಯ ಅಬ್ಬರ – ಶಾಲಾ-ಕಾಲೇಜುಗಳಿಗೆ ರಜೆ!

- Advertisement -

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮವಾಗಿ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ, ಸೆಪ್ಟೆಂಬರ್ 5ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಇದರ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 30 ರಂದು ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, N.R. ಪುರ ಹಾಗೂ ಇತರ ಗ್ರಾಮೀಣ ಭಾಗಗಳಲ್ಲಿ ಭಾರೀ ಮಳೆಯಾದುದರಿಂದ, ಇಲ್ಲಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಆಗಸ್ಟ್ 30 ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಅನೇಕ ಹೋಬಳಿಗಳಲ್ಲಿ ಶಾಲೆಗಳಿಗೆ ರಜೆ ನೀಡುವ ಆದೇಶವನ್ನು ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ಭಾರೀ ಮಳೆಯ ಪ್ರಭಾವವಿದ್ದು, ವರುಣ ಅಬ್ಬರ ಮುಂದುವರಿದಿರುವುದರಿಂದ ಆಗಸ್ಟ್ 30 ಅಂಗನವಾಡಿಯಿಂದ ಪ್ರೌಢ ಶಾಲೆವರೆಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಅವರು ನಾಳೆ ಶಾಲೆಗಳಿಗೆ ರಜೆ ನೀಡುವ ಆದೇಶ ಹೊರಡಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಪ್ರಭಾವ ಮುಂದುವರಿದಿದ್ದು, ಹೊನ್ನಾವರ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ತಹಶೀಲ್ದಾರ್ ಅವರು ರಜೆ ಘೋಷಣೆಯ ಆದೇಶವನ್ನು ಹೊರಡಿಸಿದ್ದಾರೆ.

ಹವಾಮಾನ ಇಲಾಖೆ ಇತ್ತೀಚೆಗೆ ನೀಡಿದ ಮುನ್ಸೂಚನೆಯ ಪ್ರಕಾರ, ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ ಮಾಡಲಾಗಿದೆ. ಅಲ್ಲದೇ, ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಜಾರಿಯಾಗಿದೆ.

ಅದರಂತೆ ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಬೀದರ್ ಮುಂತಾದ ಜಿಲ್ಲೆಗಳಲ್ಲಿ ಸಹ ಮಳೆಯ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ. ಕರ್ನಾಟಕದಾದ್ಯಂತ ಉತ್ತಮ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆಯ ಅಧ್ಯಯನದ ಪ್ರಕಾರ, ಸೆಪ್ಟೆಂಬರ್ 5ರವರೆಗೆ ರಾಜ್ಯಾದ್ಯಂತ ಭಾರೀ ಮಳೆಯ ಮುಂದುವರಿಯುವ ಸಾಧ್ಯತೆ ಇದೆ, ಆದ್ದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಕೋರಲಾಗಿದೆ.

ಸದ್ಯ ರಾಜ್ಯದಲ್ಲಿ ಸೆಪ್ಟೆಂಬರ ತಿಂಗಳಿನಲ್ಲೂ ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ರಾಜ್ಯದ ಜನರಿಗೆ ಎಚ್ಚರಿಕೆಯಿಂದ ಇರಬೇಕಾದ ಸೂಚನೆಯನ್ನ ನೀಡಲಾಗಿದೆ. ಕರಾವಳಿ ಭಾಗದ ಜಿಲ್ಲೆಗಳಿಗೆ ಹಾಗು ದಕ್ಷಿಣ ಕನ್ನಡ ಹಾಗು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ.

- Advertisement -

Latest Posts

Don't Miss