www.karnatakatv.net :ಬೆಂಗಳೂರು: ರಾಜ್ಯದಲ್ಲಿ ಎರಡು ದಿನ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗ್ತಿದೆ. ಆದ್ರೆ ಸೆ.5 ಮತ್ತು 6 ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗೋ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕರ್ನಾಟಕ ಜಿಲ್ಲೆಗಳಾದ ಕಲಬುರಗಿ, ವಿಜಯಪುರದಲ್ಲಿ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಂಗಳೂರು, ಶಿವಮೊಗ್ಗ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸೆ. 5ರಂದು ಮಳೆಯಾಗಲಿದ್ದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಸೆ.6 ರಂದು ಕರಾವಳಿ ಮತ್ತು ಮಲೆನಾಡಿನ ಎಲ್ಲಾ ಜಿಲ್ಲೆಗಳು ಮತ್ತು ಬೀದರ್, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಿ ಮಳೆಯಾಗುವ ಸಾಧ್ಯೆಯಿತ್ತು ಈ ಜಿಲ್ಲೆಗಳಲ್ಲಿಯೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕ ಟಿವಿ- ಬೆಂಗಳೂರು