ರಾಜ್ಯದಲ್ಲಿ ಈಗ ವರುಣನ ಆರ್ಭಟ ಜೋರಾಗಿದೆ. ಕೆಲವು ಕಡೆಯಂತೂ ಮಳೆ ಹೆಚ್ಚಾಗಿರುವುದರಿಂದ ಜನ ಜೀವನ ಅಸ್ಥವ್ಯಸ್ಥವಾಗಿದೆ. ಕರ್ನಾಟಕದಲ್ಲಿ ಮಾನ್ಸೂನ್ ಮಾರುತಗಳು ತೀವ್ರಗೊಂಡ ಪರಿಣಾಮ ರಾಜ್ಯಾದ್ಯಂತ ಭಾರಿ ಮಳೆ ಮುಂದುವರೆದಿದೆ. ಇದರಿಂದ ರಾಜ್ಯದ 7 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಕಳೆದು ಒಂದು ವಾರದಿಂದ ಬಿಡದೆ ಸುರಿಯುತ್ತಿರುವ ಭಾರಿ ಮಳೆ ಇಂದೂ ಕೂಡ ಮುಂದವರೆಯಲಿದ್ದು ಇಂದು ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ಹಿಗಾಗಿ ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಾದ್ಯಂತ 30-50 ಕಿ.ಮೀ. ವೇಗದಲ್ಲಿ ನಿರಂತರ ಗಾಳಿಯೊಂದಿಗೆ ಕರಾವಳಿ ಕರ್ನಾಟಕ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರಿ ಇಂದ ಅತಿ ಭಾರಿ ಮಳೆ ನಿರೀಕ್ಷಿಸಲಾಗಿದೆ.
ಎಲ್ಲೆಲ್ಲಿ ರೆಡ್ ಅಲರ್ಟ್:
ಕರಾವಳಿ, ದಕ್ಷಿಣ ಒಳನಾಡು, ಕೊಡಗು, ದಕ್ಷಿಣಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜುಲೈ 24ರವರೆಗೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಎಲ್ಲೆಲ್ಲಿ ಆರೆಂಜ್ ಅಲರ್ಟ್ :
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ
ಎಲ್ಲೆಲ್ಲಿ ಯೆಲ್ಲೋ ಅಲರ್ಟ್ :
ಮೈಸೂರು, ಮಂಡ್ಯ, ಚಾಮರಾಜನಗರ, ಯಾದಗಿರಿ, ರಾಯಚೂರು, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಸೋಮವಾರ ಭಾರಿ ಮಳೆಯಾಗಿತ್ತು. ಮಂಗಳವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದೆ. ಇಂದೂ ಕೂಡ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳ ಕಾಲ ಬೆಂಗಳೂರಿನಲ್ಲೂ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ