ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಮುಂದುವರಿಕೆ

ಬೆಂಗಳೂರು: ಈಗಾಗಲೇ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆಯೇ, ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ನಾಲ್ಕು ದಿನ ಭಾರೀ ಮಳೆ, ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವಂತ ವಾಯುಭಾರ ಕುಸಿತದ ಪರಿಣಾಮ ಬರಲಿದೆ. ಹಲವು ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ ಯೆಲ್ಲೋ ಅಲರ್ಟ್ ಕೂಡ ಹವಾಮಾನ ಇಲಾಖೆ ಘೋಷಿಸಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಿತ್ರದುರ್ಗ, ಮಂಡ್ಯ, ಬಳ್ಳಾರಿ, ಕೊಡಗು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಶಿವಮೊಗ್ಗ, ತುಮಕೂರು, ರಾಮನಗರ, ದಾವಣಗೆರೆ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ. ಜೊತೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

About The Author