Thursday, July 25, 2024

Latest Posts

ರಾಜ್ ಬಿ ಶೆಟ್ಟಿ ಅಭಿನಯದ “ಟೋಬಿ” ಚಿತ್ರ ಆಗಸ್ಟ್ 25 ರಂದು ತೆರೆಗೆ .

- Advertisement -

Movie News: ಮೊದಲಿನಿಂದಲೂ ತಮ್ಮ ವಿಭಿನ್ನಪಾತ್ರಗಳ ಮೂಲಕ ಜನರ ಮನ ಗೆದ್ದಿರುವ ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ “ಟೋಬಿ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ವಿಭಿನ್ನ ಕಥೆಯ ಈ ಚಿತ್ರ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ.‌ ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ. “Tobi” ಚಿತ್ರಕ್ಕೆ “ಮಾರಿ ಮಾರಿ ..ಮಾರಿಗೆ ದಾರಿ” ಎಂಬ ಅಡಿಬರಹವಿದೆ.

ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ.

Raj B Shetty ಈವರೆಗಿನ ಚಿತ್ರಗಳ ಪೈಕಿ “ಟೋಬಿ” ಬಿಗ್ ಬಜೆಟ್ ನ ಚಿತ್ರವಾಗಿದೆ. ಲೈಟರ್ ಬುದ್ಧ ಫಿಲಂಸ್, ಅಗಸ್ತ್ಯ ಫಿಲ್ಮ್ಸ್ ಹಾಗೂ ಕಾಫಿ ಗ್ಯಾಂಗ್ ಸ್ಟುಡಿಯೋ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ರವಿ ರೈ ಕಳಸ ಈ ಚಿತ್ರದ ನಿರ್ಮಾಪಕರು. ಶಾಮಿಲ್ ಬಂಗೇರ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ಮೂಲಕಥೆ ಟಿ.ಕೆ ದಯಾನಂದ್ ಅವರದು. ರಾಜ್ ಬಿ ಶೆಟ್ಟಿ ರಚೆನೆ ಹಾಗೂ ಬಾಸಿಲ್ ಅವರ ನಿರ್ದೇಶನ ಈ ಚಿತ್ರಕ್ಕಿದೆ. ಮಿಥುನ್ ಮುಕುಂದನ್ ಸಂಗೀತ ನಿರ್ದೇಶನ, ಪ್ರವೀಣ್ ಶ್ರೀಯನ್ ಛಾಯಾಗ್ರಹಣ – ಸಂಕಲನ ಹಾಗೂ ಅರ್ಜುನ್ ರಾಜ್ – ರಾಜಶೇಖರ್ ಅವರ ಸಾಹಸ ನಿರ್ದೇಶನ “ಟೋಬಿ” ಚಿತ್ರಕಿದ್ದು, ರಾಜ್ ಬಿ ಶೆಟ್ಟಿ, ಸಂಯುಕ್ತ ಹೊರನಾಡು, ಚೈತ್ರಾ ಆಚಾರ್, ಗೋಪಾಲಕೃಷ್ಣ ದೇಶಪಾಂಡೆ, ದೀಪಕ್ ರಾಜ್ ಶೆಟ್ಟಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಸಿನಿತಾರೆಯರು ಬಿಡುಗಡೆ ಮಾಡಿದರು “ಗಣ” ಚಿತ್ರದ ಫಸ್ಟ್ ಲುಕ್ ..

‘ಲವ್ ಲಿ’ ಸುಂದರ ಹಾಡಿಗೆ ಪ್ರೇಕ್ಷಕ ಫಿದಾ !

ಭಾರೀ ಮೊತ್ತಕ್ಕೆ ಮಾರಾಟವಾಯಿತು “ಜವಾನ್” ಚಿತ್ರದ ಓಟಿಟಿ, ಸಂಗೀತ ಮತ್ತು ಸ್ಯಾಟಿಲೈಟ್ ಹಕ್ಕುಗಳು

- Advertisement -

Latest Posts

Don't Miss