ಕಳೆದ 24 ಗಂಟೆಯಲ್ಲಿ ದೇಶದಲ್ಲಿ 38,772 ಜನಕ್ಕೆ ಕೊರೊನಾ ತಗುಲಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 93,92,920ಕ್ಕೇರಿದೆ.

ಕಳೆದ 24 ಗಂಟೆಯಲ್ಲಿ 443 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು 1,37,139 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ದೇಶದಲ್ಲಿ 4,46,952 ಜನ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, 88,47,600 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 45,333 ಜನ ಡಿಸ್ಚಾರ್ಜ್ ಆಗಿದ್ದಾರೆ.
ಕೊರೊನಾ ಮಹಾಮಾರಿಯಿಂದಾಗಿ ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ಹಿರಿಯ ನಾಯಕ ಅಹಮದ್ ಪಟೇಲ್ ನಿಧನರಾಗಿದ್ದರು. ಇಂದು ರಾಜಸ್ಥಾನದ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ(59) ನಿಧನರಾಗಿದ್ದಾರೆ. ಗುರುಗ್ರಾಮದ ಆಸ್ಪತ್ರೆಯಲ್ಲಿ ಕಿರಣ್ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಕಿರಣ್ ನಿಧನರಾಗಿದ್ದಾರೆ.
ಟಕೆಲ ದಿನಗಳ ಹಿಂದೆ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿತ್ತು. ಆದ್ರೆ ದೀಪಾವಳಿ ಹಬ್ಬದ ಬಳಿಕ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದೆ. ಫೆಬ್ರವರಿ ನಂತರ ಕೊರೊನಾ ಎರಡನೇ ಅಲೆ ಶುರುವಾಗಲಿದೆ ಅಂತಾ ಅಂದಾಜಿಸಲಾಗಿದೆ.