Hubballi News : ರಾಜ್ಯದಲ್ಲಿ ಹುಲಿ ಉಗುರಿನ ಸದ್ದು ಜೋರಾಗಿದೆ. ವಾಣಿಜ್ಯನಗರಿ ಹುಬ್ಬಳ್ಳಿಗೂ ಹುಲಿ ಉಗುರಿನ ನಂಟು ಸುತ್ತಿಕೊಂಡಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡನ ಮನೆಗೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಹಾಗಿದ್ದರೇ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ..
ಪೋಟೋ ಶೂಟಿಂಗ್ ವೇಳೆಯಲ್ಲಿ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಧರಿಸಿದ್ದ ಹುಲಿ ಉಗುರಿನ ಪೆಂಡೆಂಟ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಳಿಯ ರಜತ್ ಉಳ್ಳಾಗಡ್ಡಿಮಠ ಮನೆಗೆ ಆಗಮಿಸಿದ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಅರಣ್ಯ ಅಧಿಕಾರಿಗಳಿಗೆ ತಾವು ಧರಿಸಿದ್ದ ಪೆಂಡೆಂಟ್ ಹಸ್ತಾಂತರ ಮಾಡಿರುವ ರಜತ್ ಉಳ್ಳಾಗಡ್ಡಿಮಠ ಎಫ್ ಎಸ್ ಐ ಎಲ್ ವರದಿಯ ನಂತರದ ತನಿಖೆಗೂ ಸಿದ್ಧ ಎಂದಿದ್ದಾರೆ.
ಇನ್ನೂ ಹತ್ತಕ್ಕೂ ಹೆಚ್ಚು ಜನರ ಅಧಿಕಾರಿಗಳ ತಂಡ ಆಗಮಿಸಿದ್ದು, ಸುಮಾರು ಎರಡು ಗಂಟೆಗೂ ಅಧಿಕ ಕಾಲ ಪರಿಶೀಲನೆ ನಡೆಸಿದ್ದಾರೆ. ಎಸಿಎಫ್ ಪರಿಮಳಾ ವಿ.ಎಚ್., ಆರ್ ಎಫ್ ಒ ಉಪ್ಪಾರ ನೇತೃತ್ವದ ತಂಡ ಪರಿಶೀಲನೆ ನಡೆಸಿದೆ. ಅಲ್ಲದೇ ಈ ಬಗ್ಗೆ ಮಾಹಿತಿ ನೀಡಿರುವ ರಜತ್ ಉಳ್ಳಾಗಡ್ಡಿಮಠ ಸಿಂಥೆಟಿಕ್ ಲಾಕೆಟ್ ಪೋಟೋ ಶೂಟಿಂಗ್ ಗಾಗಿ ಧರಿಸಿದ್ದೆ ಈ ಬಗ್ಗೆ ಯಾವುದೇ ತನಿಖೆ ನಡೆಸಿದರೂ ಸಿದ್ದ ಎಂದಿದ್ದಾರೆ.
ಒಟ್ಟಿನಲ್ಲಿ ರಜತ್ ಉಳ್ಳಾಗಡ್ಡಿಮಠ ಮನೆಗೆ ಆಗಮಿಸಿದ ಅರಣ್ಯ ಅಧಿಕಾರಿಗಳು, ಹುಲಿ ಉಗುರಿನ ಪೆಂಡೆಂಟ್
ಮಾದರಿಯ ಚೈನ್ ಧರಿಸಿದ್ಧ ರಜತ್ ಉಳ್ಳಾಗಡ್ಡಿಮಠ ಅವರ ವಿಚಾರಣೆ ನಡೆಸಿದ್ದಾರೆ. ತನಿಖೆಯ ನಂತರವೇ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ.
ಪೋಕ್ಸೋ ಪ್ರಕರಣ-ಹುಬ್ಬಳ್ಳಿ ಕಸಬಾ ಠಾಣೆಯ ಪೊಲೀಸರಿಂದ ಸಂತ್ರಸ್ತೆಗೆ ಮಾನಸಿಕ ಕಿರುಕುಳ ಆರೋಪ