ಸಿನಿಮಾದಲ್ಲಿ ಅತಿಥಿ ಪಾತ್ರಕ್ಕೆ 25 ಕೋಟಿ ಪಡೆದ ತಲೈವಾ

ರಜನಿಕಾಂತ್ ಪುತ್ರಿ ಐಶ್ವರ್ಯಾ ರಜನಿಕಾಂತ್ ಸದ್ಯ ಹೊಸ ಸಿನಿಮಾದ ನಿರ್ದೇಶನದಲ್ಲಿ ತೊಡಗಿಕೊಂಡಿದ್ದಾರೆ. ಮಗಳ ನಿರ್ದೇಶನದ ಸಿನಿಮಾದಲ್ಲಿ ನಟಿಸಲು ದುಬಾರಿ ಸಂಭಾವನೆಯನ್ನ ರಜನಿಕಾಂತ್ ಪಡೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಲಾಲ್ ಸಲಾಮ್’ನಲ್ಲಿ ನಟಿಸಲು 25 ಕೋಟಿ ರೂಪಾಯಿ ಸಂಭಾವನೆಯನ್ನು ರಜನಿಕಾಂತ್ ಪಡೆಯುತ್ತಿದ್ದಾರೆ. ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಲು ತಲೈವಾ ದುಬಾರಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. 7 ದಿನಗಳ ಶೂಟಿಂಗ್‌ನಲ್ಲಿ ತಲೈವಾ ಭಾಗಿಯಾಗುತ್ತಿದ್ದು, ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.




