film news
ತೆಲುಗಿನ ಖ್ಯಾತ ನಿರ್ದೇಶಕ ರಾಜಮೌಳಿಯವರು ಕರ್ನಾಟಕದ ರಾಯಚೂರು ಜಿಲ್ಲೆಯ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ,ಚುನಾವಣಾ ಮತ್ತು ಮತದಾನದ ಕುರಿತು ಮತದಾರರಲ್ಲಿ ಜಾಗೃತಿ ಮುಡಿಸುವ ಸಲುವಾಗಿ ನಿರ್ದೇಶಕ ರಾಜಮೌಳಿಯವರನ್ನು ಚುನಾವಣಾ ರಾಯಭಾರಿಯಾಗಿ ಆಯ್ಕೆ ಮಾಡಿದ್ದಾರೆ ಈ ರೀತಿಯಾಗಿ ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ ಚಂದ್ರಶೇಖರ್ ನಾಯಕ್ ಅವರು ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.ಚುನಾವಣಾ ಸ್ವೀಪ್ ಆಗಿ ವಿಡಿಯೋ ಕಾನ್ಪರೆನ್ಸ ಮೂಲಕ ಜಾಗೃತಿ ಮೂಡಿಸಲಿದ್ದಾರೆ.
ರಾಜಮೌಳಿಯವರು ಕರ್ನಾಟಕದ ರಾಜ್ಯದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಅಮರೇಶ್ವರ ಕ್ಯಾಂಪ್ ನವರು . ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಸಿಇಒ ಕಳುಹಿಸಿದ ರಾಯಭಾರಿ ಪ್ರಸ್ತಾವನೆಗೆ ಮುಖ್ಯ ಚುನಾವಣಾಧಿಕಾರಿಗಳು ಸಮ್ಮತಿ ಸೂಚಿಸಿದ್ದಾರೆ.ಈಗಾಗಲೇ ರಾಯಭಾರಿಗಳ ಆಯ್ಕೆ ಪಟ್ಟಿ ಬಿಡುಗಡೆಯಾಗಿದೆ. ಚುನಾವಣಾ ಸ್ವೀಪ್ ಚಟುವಟಿಕೆಗಳಲ್ಲಿ ನಿರ್ದೇಶಕ ರಾಜಮೌಳಿ ಭಾಗವಹಿಸಲು ಸಂಪರ್ಕಿಸಿರುವುದಾಗಿ ಜಿಲ್ಲಾಡಳಿತ ತಿಳಿಸಿದ್ದಾರೆ.