Saturday, July 27, 2024

Latest Posts

ರಾಜು ಕಾಗೆ ಹೇಳಿಕೆ ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ: ಮಹೇಶ್ ಟೆಂಗಿನಕಾಯಿ

- Advertisement -

Hubli News: ಹುಬ್ಬಳ್ಳಿ: ಹುಬ್ಬಳ್ಳಿಗೆ ಅಮಿತ್ ಶಾ ಭೇಟಿ ಹಿನ್ನೆಲೆ, ನೆಹರು ಮೈದಾನದಲ್ಲಿ ಸಿದ್ಧತೆ ಪೂರ್ಣಗೊಂಡಿದೆ. ಬಹಿರಂಗ ಸಭೆ ಹಿನ್ನೆಲೆಯಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಅಲ್ಲಿನ ಶಾಸಕ ಮಹೇಶ್ ಟೆಂಗಿನಕಾಯಿ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ್ದಾರೆ.

ಇಂದು ನಡೆಯುವ ಬಹಿರಂಗ ಸಮಾವೇಶ ಅತ್ಯಂತ ಮಹತ್ವದ್ದು. ಅಮಿತ್ ಶಾ ಭೇಟಿಯಿಂದ ಧಾರವಾಡದ ಜೊತೆ ಇತರ ಕ್ಷೇತ್ರಗಳಿಗೂ ಬಿಜೆಪಿಗೆ ನೆರವಾಗುತ್ತೆ. ಕಾರ್ಯಕರ್ತರಿಗೆ ಮತ್ತಷ್ಟು ಬೂಸ್ಟ್ ಸಿಗಲಿದೆ. ಅಮಿತ್ ಶಾ ಜೊತೆ 58 ಪ್ರಮುಖರು ಕೂಡಲಿದ್ದಾರೆ. 50 ಸಾವಿರಕ್ಕೂ ಹೆಚ್ಚು ಹಾಸನದ ವ್ಯವಸ್ಥೆ ಮಾಡಲಾಗಿದೆ. ಸಮಾವೇಶಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಶಾಸಕ ರಾಜು ಕಾಗೆ ನಾಲಿಗೆ ಹರಿಬಿಟ್ಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಟೆಂಗಿನಕಾಯಿ,
ರಾಜು ಕಾಗೆ ಹೇಳಿಕೆ ಕಾಂಗ್ರೆಸ್ ಸಂಸ್ಕೃತಿಯನ್ನು ತೋರಿಸುತ್ತದೆ. ದೇಶದ ಪ್ರಧಾನಿ ಕುರಿತು ಈ ರೀತಿ ಹೇಳಿಕೆ ಸರಿಯಲ್ಲ. ಆಕಾಶಕ್ಕೆ ಉಗುಳಿದರೆ ಅವರ ಮುಖಕ್ಕೆ ಸಿಡಿಯುತ್ತೆ ಅನ್ನೋದನ್ನು ಅರ್ಥಮಾಡಿಕೊಳ್ಳಬೇಕು. ಈ ರೀತಿಯ ಭಾಷೆ ಬಳಕೆ ಸರಿಯಲ್ಲ ಎಂದಿದ್ದಾರೆ.

ಗ್ಯಾರಂಟಿ ರದ್ದು ಕುರಿತು ರಾಜು ಕಾಗೆ ಹೇಳಿಕೆ ವಿಚಾರದ ಬಗ್ಗೆ ಮಹೇಶ್ ಮಾತನಾಡಿದ್ದು,  ಸಿಎಂ ನೇರವಾಗಿ ಹೇಳೋ ಬದಲಿಗೆ ಕಾಂಗ್ರೆಸ್ ಶಾಸಕರ ಮೂಲಕ ಹೇಳಿಸುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ತಮ್ಮ ಸೋಲು ಖಚಿತ ಅಂತ ಕಾಂಗ್ರೆಸ್ ನವರಿಗೆ ಗೊತ್ತಾಗಿದೆ. ಹೀಗಾಗಿ ಕಾಂಗ್ರೆಸ್ ಶಾಸಕರು ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.

ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನ ಭಗವಂತನೂ ಕ್ಷಮಿಸಲ್ಲ: ಡಿ.ಕೆ.ಶಿವಕುಮಾರ್

ಕೆಲಸ ಮಾಡಿದ್ದೇನೆ ಓಟು ಕೊಡಿ ಎನ್ನುವ ಬದಲು ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡಿ ಓಟು ಕೇಳುತ್ತಾರೆ: ಸಿಎಂ

ರಾಮಮಂದಿರಕ್ಕೆ ನಾವೂ ಇಟ್ಟಿಗೆ ಕೊಟ್ಟಿದ್ದೀವಿ, ಆದ್ರೆ ಬಿಜೆಪಿಯವರು ಧರ್ಮಗಳ ಮಧ್ಯೆ ತಂದಿಡುತ್ತಿದ್ದಾರೆ: ನಟ ವಿಜಿ

- Advertisement -

Latest Posts

Don't Miss