Friday, October 18, 2024

Latest Posts

ಜೂ.10ಕ್ಕೆ ರಾಜ್ಯಸಭೆ ಚುನಾವಣೆ: ಕೈ ಶಾಸಕರಿಗೆ ವಿಪ್ ಜಾರಿ

- Advertisement -

ಬೆಂಗಳೂರು: ರಾಜ್ಯಸಭೆಯ ಚುನಾವಣೆಗೆ ರಣಾಂಗಣ ರಂಗೇರಿದೆ. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದರು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ ಯಾವುದೇ ಅಭ್ಯರ್ಥಿ ಹಿಂಪಡೆಯೋ ಲಕ್ಷಣಗಳೇ ಕಾಣುತ್ತಿಲ್ಲ. ಈ ನಡುವೆ ಜೂನ್ 10ರಂದು ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗುವಂತ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರಿಗೆ ಕಡ್ಡಾಯವಾಗಿ ಹಾಜರಾಗಿ, ಮತದಾನವನ್ನು ಮಾಡುವಂತೆ ಪಕ್ಷದಿಂದ ವಿಪ್ ಜಾರಿಗೊಳಿಸಲಾಗಿದೆ.

ಈ ಸಂಬಂಧ ಕಾಂಗ್ರೆಸ್ ಪಕ್ಷದ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತನ ಡಾ.ಅಜಯ್ ಧರ್ಮಸಿಂಗ್ ಅವರು ಕಾಂಗ್ರೆಸ್ ಪಕ್ಷದ ಶಾಕರಿಗೆ ವಿಪ್ ಜಾರಿಗೊಳಿಸಿದ್ದಾರೆ. ಆ ವಿಪ್ ನಲ್ಲಿ ದಿನಾಂಕ 10-06-2022ರಂದು ರಾಜ್ಯಸಭೆ ಚುನಾವಣೆ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಅಂದು ಕಡ್ಡಾಯವಾಗಿ ಕಾಂಗ್ರೆಸ್ ಶಾಸಕರು ಹಾಜರಿದ್ದು, ಪಕ್ಷದ ಅಭ್ಯರ್ಥಿಗಳಿಗೆ ಮತ ಚಲಾಯಿಸುವಂತೆ ಸೂಚಿಸಿದ್ದಾರೆ.

- Advertisement -

Latest Posts

Don't Miss