Sunday, April 13, 2025

Latest Posts

ರಾಮನು ಎಲ್ಲರಿಗೂ ಸೇರಿದವನು, ಆತ ಯಾರ ಆಸ್ತಿಯೂ ಅಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

- Advertisement -

Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹೆಸರಿನಲ್ಲಿ ರಾಮನಿದ್ದಾನೆ. ನನ್ನ ಹೆಸರಿನಲ್ಲಿ ಶಿವ ಮತ್ತು ಕುಮಾರನಿದ್ದಾನೆ. ಬಿಜೆಪಿಯವರು ನಮ್ಮನ್ನು ಸುಮ್ಮನೇ ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿದ್ದಾರೆಂದು ಕಿಡಿಕಾರಿದರು.

ದೇಶದ ನ್ಯಾಯಕ್ಕಾಗಿ ನಡೆಯುತ್ತಿರುವ ನಮ್ಮ ಯಾತ್ರೆಗೆ ತಡೆಯೊಡ್ಡುವ ಮೂಲಕ ಪ್ರಜಾಪ್ರಭುತ್ವದ ಧ್ವನಿ ಅಡಗಿಸುವ ಪ್ರಯತ್ನಗಳು ನಡೆಯುತ್ತಿರುವುದು ಖಂಡನೀಯ. ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ಕೈಗೊಂಡ ಈ ಸಂಕಲ್ಪ, ಕಾಂಗ್ರೆಸ್ ಪಕ್ಷದ ಬದ್ಧತೆಯಾಗಿದೆ. ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರು ನಡೆಸಿದ ದಂಡಿಯಾತ್ರೆ ದೇಶದ ಸ್ವಾತಂತ್ರ್ಯ ಚಳುವಳಿಗೆ ಹೊಸ ದಿಕ್ಕು ನೀಡಿದಂತೆ, ನಮ್ಮ ಈ ಭಾರತ್ ಜೋಡೋ ನ್ಯಾಯ ಯಾತ್ರೆಯೂ ಭಾರತದ ಜನರ ನ್ಯಾಯದ ಹೋರಾಟಕ್ಕೆ ಬಲ ನೀಡಲಿದೆ. ನಮ್ಮ ಈ ಐತಿಹಾಸಿಕ ಯಾತ್ರೆಗೆ ಅಡ್ಡಿಪಡಿಸಿದ ಅಸ್ಸಾಂ ಸರ್ಕಾರ, ಅಲ್ಲಿನ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಕಾರ್ಯಕರ್ತರಿಗೆ ನಾನು ಹೇಳುವುದೊಂದೇ ನಿಮ್ಮ ಗುಂಡಾಗಿರಿ, ಬೆದರಿಕೆ ಹಾಗೂ ಕೇಸ್‌ಗಳಿಗೆ ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಹೆದರುವುದಿಲ್ಲ. ಅನ್ಯಾಯದ ವಿರುದ್ದ ನಡೆಯುತ್ತಿರುವ ಈ ಯಾತ್ರೆಯು ಯಶಸ್ವಿಯಾಗಿ ನಡೆಯಲಿದೆ ಎಂದು ಡಿಕೆಶಿ ಹೇಳಿದ್ದಾರೆ.

ಇಷ್ಟೇ ಅಲ್ಲದೇ, ಸಿಎಂ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್‌ ಘೋಷಣೆ ಕೂಗಿದ್ದರ ಬಗ್ಗೆ ಪ್ರತಿಪಕ್ಷಗಳಿಂದ ವ್ಯಕ್ತವಾಗುತ್ತಿರುವ ಟೀಕೆಗಳನ್ನು ಕಂಡು ನನಗೆ ಆಶ್ಚರ್ಯವಾಗುತ್ತಿದೆ. ಅಷ್ಟಕ್ಕೂ ಇವರ ಸಮಸ್ಯೆ ಏನಂದು ನನಗೆ ಅರ್ಥವಾಗುತ್ತಿಲ್ಲ. ಮಂದಿರ ಅಯೋಧ್ಯೆಯಲ್ಲೇ ಇದ್ದರೂ ಅದು ಭಾರತದ ಸಮಸ್ತ ಹಿಂದೂಗಳಿಗೆ ಸೇರಿದ್ದು, ರಾಮನು ಎಲ್ಲರಿಗೂ ಸೇರಿದವನು, ಆತ ಯಾರ ಆಸ್ತಿಯೂ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ನಿನ್ನೆಯೂ ಟ್ವೀಟ್ ಮಾಡಿದ್ದ ಡಿಸಿಎಂ ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು ಎಂದು ವಿಶ್ ಮಾಡಿದ್ದರು.

- Advertisement -

Latest Posts

Don't Miss