ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಬೇಸರವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾರೆಡ್ಡಿ

Political News: ಸಾರಿಗೆ ಸಚಿವರಾಗಿದ್ದ ರಾಮಲಿಂಗಾರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆ ಸಚಿವ ಸ್ಥಾನ ನೀಡಿದ್ದಕ್ಕೆ ಬೇಸರವಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಮಲಿಂಗಾರೆಡ್ಡಿ ಅವರು ಈ ಬಾರಿ ಸಚಿವ ಸಂಪುಟ ಸರ್ಜರಿ ಬಳಿಕ ತಮಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗುತ್ತದೆ ಎನ್ನುವ ನಂಬಿಕೆಯಲ್ಲಿದ್ದರು. ಆದರೆ ಅವರಿಗೆ ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಬೇಸರವಾಗಿ, ಇಂದು ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ರಾಜೀನಾಮೆ ಘೋಷಣೆ ಮಾಡಿದ ರೆಡ್ಡಿ, ಬೇಸರ ವ್ಯಕ್ತಪಡಿಸಿದ್ದಾರೆ. 53 ವರ್ಷದಿಂದ ಕಾಂಗ್ರೆಸ್‌ ಪಕ್ಷದಲ್ಲಿ ಇದ್ದೇನೆ. 8 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ನನಗೆ ಕೊಟ್ಟ ಮಾತಿನಂತೆ ನಾಯಕರು ನಡೆದುಕೊಂಡಿಲ್ಲ. ಕಾಂಗ್ರೆಸ್‌ ಶಾಸಕನಾಗೇ ಇರ್ತೇನೆ.. ಸಚಿವ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡಿದ್ದೇನೆ ಎಂದಿದ್ದಾರೆ.

About The Author