Wednesday, April 24, 2024

Latest Posts

ರಾಮೇಶ್ವರಂ ಕೆಫೆ ಸ್ಪೋಟ ಕೇಸ್: ಆಸ್ಪತ್ರೆಗೆ ಭೇಟಿ ಕೊಟ್ಟು, ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

- Advertisement -

Political News: ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಬ್ರೂಕ್ ಫಿಲ್ಡ್ ಮತ್ತು ವೈದೇಹಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಇನ್ನು ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಗಾಯಗೊಂಡವರ ಚಿಕಿತ್ಸೆಗೆ ಬೇಕಾದ ಎಲ್‌ಲ ಖರ್ಚು ವೆಚ್ಚಗಳನ್ನು ಸರ್ಕಾರ ನೋಡಿಕೊಳ್ಳುತ್ತದೆ ಎಂದು ಹೇಳಿದರು. ಅಲ್ಲದೇ ಸ್ವರ್ಣಾಂಬಾ ಎಂಬ ಮಹಿಳೆಗೆ ತೀವ್ರ ಗಾಯವಾಗಿದ್ದು, ಈ ಗಾಯಕ್ಕೆ ಸ್ಪೆಶಲ್ ಟ್ರೀಟ್‌ಮೆಂಟ್ ನೀಡಲು ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಿನ್ನೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಸಂಭವಿಸಿದ್ದು, ಮೂವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಚೆನ್ನೈನಿಂದ ವಿಶೇಷ ತಂಡ ಆಗಮಿಸಿದ್ದು, ಬಾಂಬ್ ಸ್ಪೋಟದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಮೂವರು ತಿಂಡಿ ತಿನ್ನಲು ಬಂದ ಗ್ರಾಹಕಾರಿಗಿದ್ದು, ಓರ್ವ ಅಲ್ಲೇ ಕೆಲಸ ಮಾಡುವ ವ್ಯಕ್ತಿಯಾಗಿದ್ದಾನೆ.

ರಾಜ್ಯದ ಸಾಮಾನ್ಯ ಜನರ ಬದಕು ಅಸುರಕ್ಷಿತವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ರಾಜಕೀಯಕ್ಕೆ ವಿದಾಯ ಹೇಳಿದ ಮಾಜಿ ಕ್ರಿಕೇಟಿಗ ಗೌತಮ್ ಗಂಭೀರ್..

ಹಾಸನದಲ್ಲಿ ಹಾಡುಹಗಲೇ ಚಿರತೆ ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ

- Advertisement -

Latest Posts

Don't Miss