- Advertisement -
ರೇಣುಕಾಸ್ವಾಮಿ ಕೊಲೆ ಪ್ರಕರಣ ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಮ್ಮೆ ಕಾಡ್ಗಿಚ್ಚು ಹೊತ್ತಿಸಿದೆ. ಆರೋಪಿಗಳಿಗೆ ಶಿಕ್ಷೆ ಆಗಬೇಕೆಂಬ ನಟಿ ರಮ್ಯಾ ಹೇಳಿಕೆಗೆ, ದರ್ಶನ್ ಫ್ಯಾನ್ಸ್ ಅಶ್ಲೀಲ ಕಾಮೆಂಟ್ ಮಾಡಿದ್ದಾರೆ. ಈ ಬಗ್ಗೆ ದೂರು ಕೊಡಲು ರಮ್ಯ ಅವರು ಮುಂದಾಗಿದ್ದಾರೆ. ಮಹಿಳಾ ಆಯೋಗವು ರಮ್ಯ ಅವರ ಪರ ನಿಂತಿದೆ. ಇದೀಗ ನಟ ಚೇತನ್ ಅಹಿಂಸ ಅವರ ಸಂಸ್ಥೆಯಿಂದ ಫಿಲಂ ಇಂಡಸ್ಟ್ರಿ ರೈಟ್ಸ್ & ಈಕ್ವಾಲಿಟಿ ಯಿಂದ ಗೃಹ ಸಚಿವ ಜಿ . ಪರಮೇಶ್ವರ್ ಸವರಿಗೆ ಖುದ್ದು ಪತ್ರ ಬರೆದಿದ್ದಾರೆ.
ಗೃಹ ಸಚಿವರಿಗೆ ಬರೆದ ಪತ್ರದಲ್ಲಿ ಏನಿದೆ?
ಫಿಲಂ ಇಂಡಸ್ಟ್ರಿ ಫಾರ್ ರೈಟ್ಸ್ & ಈಕ್ವಾಲಿಟಿ ಸಂಸ್ಥೆಯು ನಟಿ ಹಾಗೂ ಮಾಜಿ ಸಂಸದರಾದ ರಾಮ್ಯ (ದಿವ್ಯ ಸ್ಪಂದನ) ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಅಶ್ಲೀಲ ಹಾಗೂ ಮಹಿಳಾವಿರೋಧಿ ಟ್ರೋಲಿಂಗ್ ಅನ್ನು ತೀವ್ರವಾಗಿ ಖಂಡಿಸುತ್ತದೆ ಮತ್ತು ರಮ್ಯ ರವರಿಗೆ ನಮ್ಮ ಬೆಂಬಲವನ್ನು ವ್ಯಕ್ತಪಡಿಸುತ್ತದೆ.
ಭಾರತದ ಸಂವಿಧಾನದಲ್ಲಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಧ್ಯಮಗಳ ಹಕ್ಕುಗಳು ನಮ್ಮ ಪ್ರಜಾಪ್ರಭುತ್ವದ ಬಾಳಿಗೆ ಆಧಾರಸ್ತಂಭವಾಗಿವೆ. ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳು ಸಹಜವಾಗಿದ್ದು ಅವುಗಳ ನಡುವೆ ಸಂವಾದ ನಡೆಯಬೇಕು. ಆದರೆ ಆ ಸಂವಾದ ಸಭ್ಯತೆಯೊಂದಿಗೆ ಮತ್ತು ಗೌರವಪೂರ್ಣವಾಗಿ ನಡೆಯಬೇಕು.
ರಮ್ಯ ಅವರ ವಿರುದ್ಧ ನಡೆಯುತ್ತಿರುವ ದ್ವೇಷಪೂರಿತ ದೌರ್ಜನ್ಯ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಅಪಮಾನವಾಗಿದೆ ಮತ್ತು ಇದು ಆನ್‌ಲೈನ್ ಮಹಿಳಾ ದ್ವೇಷದ ಆಳವಾದ ಸಮಸ್ಯೆಯನ್ನು ತೋರಿಸುತ್ತದೆ ಮಹಿಳೆಯರ ವಿರುದ್ಧದ ಅವಮಾನಕಾರಕ ಸಾಮಾಜಿಕ ಜಾಲತಾಣ ಪೋಸ್ಟ್‌ಗಳು ಭಾರತ ದಂಡಸಂಹಿತೆಯ ಸೆಕ್ಷನ್‌ಗಳು (499, 500, 505(2), 509) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ (ಸೈಬರ್ ಕಾನೂನು) ಅಡಿಯಲ್ಲಿ ದಂಡನೀಯವಾಗಿವೆ. ಕರ್ನಾಟಕ ಗೃಹ ಇಲಾಖೆ ಮತ್ತು ಸೈಬರ್ ಕ್ರೈಮ್ ಪ್ರಾಧಿಕಾರಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು FIRE ಸಂಸ್ಥೆಯು ಒತ್ತಾಯಿಸುತ್ತಿದೆ.
ಹೀಗೆಂದು FIRE ಸಂಸ್ಥೆಯಿಂದ ಪತ್ರ ಬರೆದಿದ್ದು ಇದಕ್ಕೆ ಗೃಹ ಸಚಿವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ. ರಮ್ಯ ದರ್ಶನ್ ಫ್ಯಾನ್ಸ್ ವಾರ್ ಎಲ್ಲಿ ಹೋಗಿ ಮುಟ್ಟುತ್ತದೆ. ಕಾದು ನೋಡಬೇಕಿದೆ.
ವರದಿ:ರಂಜಿತ ರೇವಣ್ಣ ನಾಟನಹಳ್ಳಿ
- Advertisement -

