Sunday, April 13, 2025

Latest Posts

ಕಳಸಾ ಬಂಡೂರಿ ಯೋಜನೆಗೆ 8 ವರ್ಷಗಳಿಂದ ಬಿಜೆಪಿ ಸರ್ಕಾರ ತಡೆ ಹಿಡಿದಿದೆ : ರಣದೀಪ್ ಸುರ್ಜೇವಾಲ

- Advertisement -

ಹುಬ್ಬಳ್ಳಿ: ಬಿಜೆಪಿ ಸರ್ಕಾರ 8 ವರ್ಷಗಳಿಂದ ಕಳಸಾ ಬಂಡೂರಿ ಯೋಜನೆಗೆ ತಡೆ ಹಿಡಿದಿದೆ. ಮುಂದೆ ಬರುವ ಕಾಂಗ್ರೆಸ್ ಸರ್ಕಾರ ಕೃಷ್ಣಾ ಯೋಜನೆ ಜಾರಿಗೆ ಪ್ರತಿ ವರ್ಷ ಬಜೆಟ್ ಅನುದಾನದಲ್ಲಿ 40 ಸಾವಿರ ಕೋಟಿಗೂ ಹೆಚ್ಚು ಅನುದಾನವನ್ನು ಮೀಸಲಿಡಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈ ಭಾಗದ ಜನರಿಗೆ ಈಗ ಸಂಘರ್ಷದ ಕಾಲವಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದಲ್ಲಿ 130 ಟಿಎಂಸಿ ನೀರಿನ ಪ್ರತಿ ಹನಿಯ ಬಳಕೆ ಮಾಡಿಕೊಳ್ಳಬೇಕು. ಈ ವಿಚಾರದಲ್ಲಿ ಕಳೆದ 8 ವರ್ಷಗಳಿಂದ ಬಿಜೆಪಿ ಸರ್ಕಾರ ಜನರಿಗೆ ಮೋಸ ಮಾಡುತ್ತಾ ಬಂದಿದೆ. ಇದರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಹೋರಾಡಲು ಸಿದ್ಧರಿದ್ದಾರೆ ಎಂದು ತಿಳಿಸಿದರು.

ಸಹಕಾರ ರಂಗದಲ್ಲಿ ವಿಶ್ವಾಸಾರ್ಹತೆ ಉಳಿಸಿಕೊಂಡು ಹೋಗುವುದು ಬಹಳ ಮುಖ್ಯ : ಸಿಎಂ ಬೊಮ್ಮಾಯಿ

ಮುಂದಿನ ಮೂರು ತಿಂಗಳ ನಂತರ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಕೃಷ್ಣಾ ನದಿ ನೀರಿನ ಯೋಜನೆಯ ಮೊದಲ ಹಾಗೂ ಎರಡನೇ ಹಂತವನ್ನು ಕಾಂಗ್ರೆಸ್ ಸರ್ಕಾರಗಳೇ ಮಾಡಿದ್ದು, ಮೂರನೇ ಹಂತದ ಯೋಜನೆಯನ್ನು ಕಾಂಗ್ರೆಸ್ ಸರ್ಕಾರವೇ ಮಾಡಲಿದೆ. ಇದರಿಂದ 130 ಟಿಎಂಸಿ ನೀರು ಹೆಚ್ಚುವರಿಯಾಗಿ ಸಿಗಲಿದ್ದು, 6 ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ಸಿಗುತ್ತದೆ ಎಂದು ತಿಳಿಸಿದರು. ಅಮಿತ್ ಶಾ ಅವರು ಕೂಡ ರಾಜ್ಯ ಪ್ರವಾಸ ಮಾಡಿದ್ದು, ಅವರು ಕೃಷ್ಣಾ ನದಿ ವಿಚಾರವಾಗಿ ನಿಮ್ಮ ಜತೆ ಮಾತನಾಡುವುದಿಲ್ಲ. ಮಹದಾಯಿ ನದಿ ವಿಚಾರವಾಗಿ ಮಾತನಾಡುವುದಿಲ್ಲ. ಕಾರಣ ಮೋದಿ ಹಾಗೂ ಅಮಿತ್ ಶಾ ಅವರು ರಾಜ್ಯದ ಜನರಿಗೆ ಈ ಎರಡು ನದಿಗಳಿಂದ ಸಿಗಬೇಕಾದ ನೀರನ್ನು ವಂಚಿಸಿದ್ದಾರೆ. ಈ ಕಾರಣಕ್ಕೆ ಅವರು ಮಾತನಾಡುವುದಿಲ್ಲ. ಅವರ ಜತೆ ನಿಂತಿರುವವರು ಕೂಡ ಈ ಭಾಗದ ಜನರಿಗೆ ಕೃಷ್ಣಾ ಹಾಗೂ ಮಹಾದಾಯಿ ನೀರು ಸಿಗದಂತೆ ಮಾಡಿದ್ದಾರೆ. ಮೂರು ತಿಂಗಳ ನಂತರ ನಡೆಯಲಿರುವ ಚುನಾವಣೆಯಲ್ಲಿ ಹೊಸ ಇತಿಹಾಸ ಬರೆಯಲಾಗುವುದು ಎಂದು ಹೇಳಿದರು.

ಬಿಜೆಪಿ ಚುನಾವಣಾ ಪ್ರಚಾರ ಶುರು : ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಅಮಿತ್ ಶಾ ವಿಶೇಷ ಗಮನ

ಪೇರಲೆ ಮರದ ಎಲೆಗಳು ಆರೋಗ್ಯಕ್ಕೆಷ್ಟು ಲಾಭಕಾರಿ ಗೊತ್ತಾ..?

 

 

- Advertisement -

Latest Posts

Don't Miss