Thursday, December 4, 2025

Latest Posts

ಗರ್ಭಿಣಿಯ ಮೇಲೆ ಅತ್ಯಾ*ಚಾರ? ಕಾಂಗ್ರೆಸ್‌ ಶಾಸಕ ಮನೆಯಲ್ಲಿ ಶೋಧ

- Advertisement -

ರಾಜಕೀಯ ವಲಯದಲ್ಲಿ ಕಾಂಗ್ರೆಸ್ ಶಾಸಕನ ವಿರುದ್ಧ ಗಂಭೀರ ಆರೋಪಗಳು ಬೆಳಕಿಗೆ ಬಂದಿದ್ದು, ಪ್ರಕರಣದಲ್ಲಿ ಪೊಲೀಸರು ತೀವ್ರ ತನಿಖೆ ಆರಂಭಿಸಿದ್ದಾರೆ. ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಅಮಾನತಿಗೊಳಗಾಗಿರುವ ರಾಹುಲ್ ಮಾಂಕೂಟತ್ತಿಲ್ ಅವರ ಅಪಾರ್ಟ್‌ಮೆಂಟ್‌ನಲ್ಲಿ ಭಾನುವಾರ ಪೊಲೀಸರು ಶೋಧ ನಡೆಸಿದ್ದಾರೆ.

ಅತ್ಯಾಚಾರದ ಆರೋಪಕ್ಕೆ ಗುರಿಯಾದ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಅಮಾನತಿಗೆ ಒಳಪಡಿಸಿದ ಬಳಿಕ, ಪೊಲೀಸರು ಭಾನುವಾರ ಅವರ ಅಪಾರ್ಟ್‌ಮೆಂಟ್‌ನಲ್ಲಿ ಸಾಕ್ಷ್ಯ ಸಂಗ್ರಹಕ್ಕಾಗಿ ಶೋಧ ಕಾರ್ಯಾಚರಣೆ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವೆಂಬರ್ 28ರಂದು ದಾಖಲಾಗಿರುವ ಎಫ್‌ಐಆರ್ ಪ್ರಕಾರ, ಮೇ ತಿಂಗಳ ಕೊನೆಯ ವಾರದಲ್ಲಿ ಎರಡು ದಿನಗಳ ಕಾಲ ಗರ್ಭಿಣಿ ಮಹಿಳೆಯ ಮೇಲೆ ಅಪಾರ್ಟ್‌ಮೆಂಟ್‌ನಲ್ಲಿ ಅತ್ಯಾಚಾರ ನಡೆಯಿತು ಎಂದು ಆರೋಪಿಸಲಾಗಿದೆ.

ಪೊಲೀಸರು ಮಹಿಳೆ ಸ್ಥಳಕ್ಕೆ ಭೇಟಿ ನೀಡಿದ್ದಾರೆಯೇ ಎಂಬುದನ್ನು ಪರಿಶೀಲಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದಾರೆ. ಇದೇ ವೇಳೆ ಅಪಾರ್ಟ್‌ಮೆಂಟ್‌ನಿಂದ ಸಂಬಂಧಿತ ದಾಖಲೆಗಳು ಮತ್ತು ಇನ್ನಿತರ ಡಿಜಿಟಲ್ ಸಾಧನಗಳನ್ನೂ ಪರಿಶೀಲಿಸಲಾಗಿದೆ ಎಂದು ತಿಳಿಸಲಾಗಿದೆ. ಶಾಸಕ ಮಾಂಕೂಟತ್ತಿಲ್ ನಿರೀಕ್ಷಣಾ ಜಾಮೀನುಗಾಗಿ ತಿರುವನಂತಪುರದ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ವಿಚಾರಣೆ ಬುಧವಾರ ನಡೆಯಲಿದೆ.

ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಶೋಧ ಮತ್ತು ಸಿಸಿಟಿವಿ ಪರಿಶೀಲನೆಗಳೊಂದಿಗೆ ತನಿಖೆ ಮತ್ತಷ್ಟು ವೇಗಗೊಳ್ಳುವ ಸಾಧ್ಯತೆಯಿದೆ.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss