ರಶ್ಮಿಕಾ ಮಂದಣ್ಣ & ವಿಜಯ್ ದೇವರಕೊಂಡ ಮದುವೆ ಡೌಟ್!

ನಟಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಜೋಡಿ ಫೆಬ್ರವರಿ 26, 2026ರಂದು ವಿವಾಹವಾಗಲಿದ್ದಾರೆ ಎಂಬ ಸುದ್ದಿಗೆ ಇದೀಗ ಬ್ರೇಕ್ ಬಿದ್ದಂತಾಗಿದೆ. ಮದುವೆ ದಿನಾಂಕ ಹತ್ತಿರವಾಗುತ್ತಿದ್ದರೂ, ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಇಲ್ಲದಿರುವುದು ಅನುಮಾನಕ್ಕೆ ಕಾರಣವಾಗಿದೆ.

ಸದ್ಯ ಲಭ್ಯವಾದ ಮಾಹಿತಿಯ ಪ್ರಕಾರ, ಇಬ್ಬರೂ ತಮ್ಮ ಮದುವೆಯನ್ನು ತಾತ್ಕಾಲಿಕವಾಗಿ ಮುಂದೂಡಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಕಾರಣ – ಇಬ್ಬರಿಗೂ ಸಮಯದ ಕೊರತೆ.

ವಿಜಯ್ ದೇವರಕೊಂಡ ಅವರು ಸದ್ಯ ‘ರೌಡಿ ಜನಾರ್ದನ’ ಹಾಗೂ ‘ರಣಬಾಲಿ’ ಸಿನಿಮಾಗಳ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ ರಶ್ಮಿಕಾ ಮಂದಣ್ಣ ಅವರೊಂದಿಗೆ ‘ಗೀತ ಗೋವಿಂದಂ ಭಾಗ–2’ ಚಿತ್ರದಲ್ಲೂ ನಟಿಸುವ ಸಾಧ್ಯತೆ ಇದೆ.

ಇನ್ನೂ ‘ರಣಬಾಲಿ’ ಚಿತ್ರದಲ್ಲಿ ವಿಜಯ್ ಜೊತೆ ರಶ್ಮಿಕಾ ನಾಯಕಿಯಾಗಿ ನಟಿಸುತ್ತಿದ್ದು, ಈ ಸಿನಿಮಾ ಸೆಪ್ಟೆಂಬರ್ 11, 2026ರಂದು ಬಿಡುಗಡೆಯಾಗಲಿದೆ.

ಅತ್ತ ರಶ್ಮಿಕಾ ಮಂದಣ್ಣ ಕೂಡ ‘ಮೈಸಾ’, ‘ಪುಷ್ಪ–3’ ಹಾಗೂ ‘ಕಾಕ್‌ಟೈಲ್–2’ ಸೇರಿದಂತೆ ಹಲವು ದೊಡ್ಡ ಪ್ರಾಜೆಕ್ಟ್‌ಗಳಲ್ಲಿ ನಿರತರಾಗಿದ್ದಾರೆ. ಈ ಕಾರಣದಿಂದ ಇಬ್ಬರೂ ತಮ್ಮ ವೈಯಕ್ತಿಕ ಕಾರ್ಯಕ್ರಮಗಳನ್ನು ಕೆಲಕಾಲ ಮುಂದೂಡಿರುವ ಸಾಧ್ಯತೆ ಇದೆ.

ಒಟ್ಟಾರೆ, ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಈ ಸ್ಟಾರ್ ಜೋಡಿಯ ಮದುವೆ ಸುದ್ದಿ ಸದ್ಯಕ್ಕೆ “ಹೋಲ್ಡ್” ಆಗಿರುವಂತಾಗಿದೆ.

ವರದಿ : ಲಾವಣ್ಯ ಅನಿಗೋಳ

About The Author