ಟೀಮ್ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ, ಸದ್ಯ ವಿಶ್ವಕಪ್ ಟೂರ್ನಿಯಲ್ಲಿ ಬ್ಯೂಸಿ. ಇದೂವರೆಗೂ ಆಡುವ ಹನ್ನೊಂದರ ಬಳಗದಲ್ಲಿ ಚಾನ್ಸ್ ಪಡೆಯದಿದ್ರೂ, ಮೀಸಲು ಆಟಗಾರನಾಗಿ ಗಮನ ಸೆಳೆದಿದ್ದಾರೆ. ಅದರಲ್ಲೂ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಬದಲಿ ಆಟಗಾರನಾಗಿ ಫೀಲ್ಡಿಂಗ್ ಮಾಡಿದ್ದ ಜಡೇಜಾ, ಜೇಸನ್ ರಾಯ್ ಅವರ ಅದ್ಭುತ ಕ್ಯಾಚ್ ಪಡೆದಿದ್ದರು. ಈ ಒಂದು ಕ್ಯಾಚ್ ಕ್ರಿಕೆಟ್ ಜಗತ್ತಿನ ಮೆಚ್ಚುಗೆಗೆ ಪಾತ್ರವಾಗಿತ್ತು. ಈ ನಡುವೆ ಸೌರಾಷ್ಟ್ರ ಕ್ರಿಕೆಟರ್ ಜಡೇಜಾ, ಭಾರತದ ಮಾಜಿ ಕ್ರಿಕೆಟಿಗನಿಗೆ ಎಚ್ಚರಿಕೆ ನೀಡಿದ್ದಾರೆ.
ಹೌದು, ಭಾರತ ತಂಡದ ಮಾಜಿ ಕ್ರಿಕೆಟಿಗ, ಹಾಲಿ ಕಾಮೆಂಟೇಟರ್ ಸಂಜಯ್ ಮಂಜ್ರೇಕರ್ ಗೆ, ಟೀಮ್ ಇಂಡಿಯಾ ಆಲ್ ರೌಂಡರ್ ಖಡಕ್ ಆಗಿಯೇ ವಾರ್ನ್ ಮಾಡಿದ್ದಾರೆ. ಇತ್ತೀಚೆಗಷ್ಟೇ ಖಾಸಗಿ ಸಂದರ್ಶನ ಒಂದರಲ್ಲಿ ಮಾತನಾಡಿದ್ದ ಮಾಜಿ ಕ್ರಿಕೆಟಿಗ “ನಾನು ಜಡೇಜಾರಂತಹ ಸಣ್ಣಪುಟ್ಟ ಆಟಗಾರರ ಅಭಿಮಾನಿಯಲ್ಲ” ಎಂದಿದ್ದರು. ಈ ವಿಷಯಕ್ಕೆ ಸಂಬಂಧಿಸಿದಂತೆ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿರುವ ಜಡ್ಡು, ಸಾಧಕರಿಗೆ ಗೌರವ ನೀಡುವುದನ್ನು ಕಲಿಯಿರಿ ಅಂತ ಕೊಂಚ ಖಡಕ್ ಆಗಿಯೇ ಎಚ್ಚರಿಸಿದ್ದಾರೆ.
ಅಷ್ಟೇ ಅಲ್ಲದೇ ಗೌರವ ಕೊಟ್ಟು ಗೌರವ ಪಡೆಯುವುದನ್ನು ಕಲಿಯಿರಿ ಎಂದಿದ್ದಾರೆ. ಅಷ್ಟಕ್ಕೇ ಮಾತು ನಿಲ್ಲಿಸದ ಜಡೇಜಾ, ನೀವು ಭಾರತದ ಪರ ಆಡಿದ್ದ ಪಂದ್ಯಗಳಿಗಿಂತ ಎರಡು ಪಟ್ಟು ಪಂದ್ಯಗಳನ್ನ ನಾನು ಆಡಿದ್ದೇನೆ. ಈಗಲೂ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದೇನೆ. ಮೊದಲು ಸಾಧಕರಿಗೆ ಗೌರವ ನೀಡುವುದನ್ನು ಕಲಿಯಿರಿ. ನಿಮ್ಮ ಅನಗತ್ಯ ಮಾತುಗಳನ್ನು ಕೇಳಿ ಸಾಕಾಗಿದೆ ಅಂತ ವಾರ್ನ್ ಮಾಡಿದ್ದಾರೆ.
ರೊಚ್ಚಿಗೆದ್ದ ರೋಹಿತ್ ಶರ್ಮಾ, ಎಲ್ಲರ ದಾಖಲೆಗಳು ಉಡೀಸ್..!ಮಿಸ್ ಮಾಡದೇ ಈ ವಿಡಿಯೋ ನೋಡಿ