www.karnatakatv.net : ಬೆಂಗಳೂರು : ಮಂಡ್ಯದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಸಂಸದೆ ಸುಮಲತಾ ಸುತ್ತ ಇರುವವರೆಲ್ಲ ಅಕ್ರಮದವರೇ. ಗೂಂಡಾಗಳ ರೀತಿ ವರ್ತಿಸಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಆರೋಪವನ್ನು ಮಾಡಿದ್ದಾರೆ. ಸಂಸದೆ ಸುಮಲತಾ ಅವರ ಬಳಿ ಕೆಲಸ ಮಾಡುವ ಆಪ್ತ ಸಹಾಯಕರನ್ನು ಬಂಧಿಸಿ ಕೇಸು ದಾಖಲಿಸುವಂತೆ ಆಗ್ರಹಿಸಿದ್ದಾರೆ. ಸುಮಲತಾ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಭಟ್ ವಿರುದ್ಧ ಕೂಡ ದೂರು ದಾಖಲಿಸುವಂತೆ ಒತ್ತಾಯಿಸಿದ್ದಾರೆ.
ನೀರಾವರಿ ಇಲಾಖೆಯ ಮುಖ್ಯ ಎಂಜಿನಿಯರ್, ಸೂಪರಿಂಟೆಂಡೆಂಟ್ ಗಳನ್ನು ದಬಾಯಿಸಿ ಮಾತನಾಡುತ್ತಿದ್ದಾರೆ. ಒತ್ತಡ ಕೊಡುತ್ತಿದ್ದಾರೆ, ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಸುಮಲತಾ ಮತ್ತು ಅವರ ಸುತ್ತಮುತ್ತಲವರಿಂದ ಜಿಲ್ಲೆಯ ಅಧಿಕಾರಿಗಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು. ಅಕ್ರಮದವರನ್ನಿಟ್ಟುಕೊಂಡು ಹೀಗೆ ಏಕೆ ಅಧಿಕಾರ ಚಲಾಯಿಸುತ್ತಿದ್ದೀರಿ ಎಂದು ಎದುರುಗಡೆಯಿಂದ ಕೇಳಿದರೆ ಉತ್ತರ ಬರುತ್ತಿಲ್ಲ, ಮಾಧ್ಯಮ ಪ್ರತಿನಿಧಿಗಳೇ ಇದಕ್ಕೆಲ್ಲಾ ಸಾಕ್ಷಿ.ಕೂಡಲೇ ಸಂಸದೆಯ ಸಹಾಯಕರನ್ನು ಬಂಧಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ. ಅವರ ವಿರುದ್ಧ ಕೂಡ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಆಗ್ರಹಿಸಿದ್ದಾರೆ.
ವಿನುತಾ ಹವಾಲ್ದಾರ್ ಕರ್ನಾಟಕ ಟಿವಿ ಬೆಂಗಳೂರು