ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 950 ಅಸಿಸ್ಟೆಂಟ್(Assistant) ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ www.rbi.org.in ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ,
ಹುದ್ದೆಯ ಹೆಸರು : ಅಸಿಸ್ಟೆಂಟ್ ಹುದ್ದೆ
ಒಟ್ಟು ಹುದ್ದೆಗಳು : 950
ಉದ್ಯೋಗದ ಸ್ಥಳ : ಭಾರತ
ವಿದ್ಯಾರ್ಹತೆ:
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ಉದ್ಯೋಗದ ಸ್ಥಳ:
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುತ್ತದೆ.
ವೇತನ:
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಕೆ ವಿಧಾನ : ಆನ್ಲೈನ್
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ :17/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08/03/2022