Saturday, July 27, 2024

Latest Posts

RBI : 950 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..!

- Advertisement -

ಭಾರತೀಯ ರಿಸರ್ವ್​ ಬ್ಯಾಂಕ್ (Reserve Bank of India)  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 950 ಅಸಿಸ್ಟೆಂಟ್(Assistant)​ ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​​ 8 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ www.rbi.org.in ಗೆ ಭೇಟಿ ನೀಡಬಹುದು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ,

ಹುದ್ದೆಯ ಹೆಸರು :  ಅಸಿಸ್ಟೆಂಟ್ ಹುದ್ದೆ

ಒಟ್ಟು ಹುದ್ದೆಗಳು : 950

ಉದ್ಯೋಗದ ಸ್ಥಳ : ಭಾರತ

ವಿದ್ಯಾರ್ಹತೆ:
ರಿಸರ್ವ್ ಬ್ಯಾಂಕ್ ಆಫ್​ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.


ಉದ್ಯೋಗದ ಸ್ಥಳ:
ರಿಸರ್ವ್ ಬ್ಯಾಂಕ್ ಆಫ್​ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುತ್ತದೆ.

ವೇತನ:
ರಿಸರ್ವ್ ಬ್ಯಾಂಕ್ ಆಫ್​ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಮೇಲ್ಕಂಡ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ
ಅರ್ಜಿ ಸಲ್ಲಿಕೆ ವಿಧಾನ : ಆನ್​​​ಲೈನ್

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ :17/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 08/03/2022

- Advertisement -

Latest Posts

Don't Miss