ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನ, ಮರು ಎಣಿಕೆ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು, ಪದವಿ ಪೂರ್ವ ಶಿಕ್ಷಣ ಮಂಡಳಿಯು ಇಂದು ಪ್ರಕಟಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು, ಏಪ್ರಿಲ್, ಮೇ 2022ರಲ್ಲಿ ನಡೆದಿದ್ದಂತ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 18-06-2022ರಂದು ಪ್ರಕಟಿಸಲಾಗಿತ್ತು. ಮರು ಮೌಲ್ಯಮಾಪನಕ್ಕೆ ಮತ್ತು ಮರು ಎಣಿಕೆಗೆ ಅರ್ಜಿಯನ್ನು ಸಲ್ಲಿಸಿದ ವಿದ್ಯಾರ್ಥಿಗಳ ಫಲಿತಾಂಶವನ್ನು ದಿನಾಂಕ 31-07-2022ರ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಫಲಿತಾಂಶದ ನಂತ್ರ, ಮರು ಮೌಲ್ಯಮಾಪನಕ್ಕೆ, ಮರು ಎಣಿಕೆಗೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳು ಇಲಾಖೆಯ ವೆಬ್ ಸೈಟ್ https://pue.karnataka.gov.in/ ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸುವಂತೆ ತಿಳಿಸಿದೆ.

About The Author