- Advertisement -
Recipe: ಬೇಕಾಗುವ ಸಾಮಗ್ರಿ: ಒಂದು ಕಪ್ ಪನೀರ್, 2 ಸ್ಪೂನ್ ಎಣ್ಣೆ, 1 ಸ್ಪೂನ್ ಜೀರಿಗೆ, 1 ಈರುಳ್ಳಿ, 1 ಟೊಮೆಟೋ, ಚಿಟಿಕೆ ಅರಿಶಿನ, ಅರ್ಧ ಸ್ಪೂನ್ ಖಾರದ ಪುಡಿ, ಗರಂ ಮಸಾಲೆ ಪುಡಿ, ಕಸೂರಿ ಮೇಥಿ, ಕೊತ್ತೊಂಬರಿ ಸೊಪ್ಪು, ರುಚಿಗೆ ತಕ್ಕಷ್ಟು ಉಪ್ಪು.
ಮಾಡುವ ವಿಧಾನ: ಮೊದಲು ಪ್ಯಾನ್ ಬಿಸಿ ಮಾಡಿ, 2 ಸ್ಪೂನ್ ಎಣ್ಣೆ ಹಾಕಿ, ಜೀರಿಗೆ, ಈರುಳ್ಳಿ ಹಾಕಿ ಹುರಿದುಕೊಳ್ಳಿ. ಬಳಿಕ ಟೊಮೆಟೋ ಹಾಕಿ ಹುರಿಯಿರಿ. ಅರಿಶಿನ, ಖಾರದ ಪುಡಿ, ಗರಂ ಮಸಾಲೆ, ಉಪ್ಪು ಹಾಕಿ ಮಿಕ್ಸ್ ಮಾಡಿ. ಬಳಿಕ ಪನೀರ್ ಸಣ್ಣ ಸಣ್ಣ ಪೀಸ್ಟ್ ಮಾಡಿ, ಮಿಕ್ಸ್ ಮಾಡಿ. 3 ನಿಮಿಷ ಮಂದ ಉರಿಯಲ್ಲಿ ಬೇಯಿಸಿ. ಕೊನೆಗೆ ಕಸೂರಿ ಮೇಥಿ, ಕೊತ್ತೊಂಬರಿ ಸೊಪ್ಪು ಹಾಕಿ ಮಿಕ್ಸ್ ಮಾಡಿದ್ರೆ, ಪನೀರ್ ಬುರ್ಜಿ ರೆಡಿ.
- Advertisement -