ಭಾರತೀಯ ಅಂಚೆ ಇಲಾಖೆ ಕ್ರೀಡಾ ಕೋಟಾದಡಿ ಅಂಚೆ ಸಹಾಯಕ , ಪೋಸ್ಟ್ ಮ್ಯಾನ್ , ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸೇರಿದತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 221 ಹುದ್ದೆಗಳು ಖಾಲಿಯಿದ್ದು, ಅರ್ಜಿದಾರರು ಈ ವರ್ಷದ ನವೆಂಬರ್ 12ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇನ್ನು ಅಂಚೆ ಇಲಾಖೆಯ 72 ಅಂಚೆ ಸಹಾಯಕ ಹುದ್ದೆ, 90 ಪೋಷ್ಟಮ್ಯಾನ್, 59 ಮಲ್ಟಿಟಾಸ್ಕಿಂಗ್ ಸ್ಟಾಫ್ ಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಇನ್ನು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 27 ವರ್ಷದೊಳಗಿನ ವಯೋಮಾನದವರಾಗಿರಬೇಕು. ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ .
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಮುಖವಾಗಿ ಕ್ರೀಡಾ ಅರ್ಹತೆಯನ್ನು ಪಡೆದಿರಬೇಕು. ಈಗಾಗಲೇ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ನವೆಂಬರ್ 12ರವರೆಗೂ ಅಭ್ಯರ್ಥಿಗಳ ಅರ್ಜಿ ಸಲ್ಲಿಸಬಹುದಾಗಿದೆ.
ಇನ್ನು ಅರ್ಜಿಯನ್ನು ಭಾರತೀಯ ಅಂಚೆಯ ಅಧಿಕೃತ ವೆಬ್ ಸೈಟ್ www.indiapost.gov.in ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಇನ್ನು ಅರ್ಜಿಯನ್ನು ಪ್ರಿಂಟ್ ಔಟ್ ತೆಗೆದು ಸಂಪೂರ್ಣ ವಿವರ ಮತ್ತು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅಧಿಸೂಚನೆಯಲ್ಲಿ ನೀಡಿರುವ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ಡ್ ಪೋಸ್ಟ್ ಮೂಲಕ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಂಚೆ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಲಾಗಾನ್ ಮಾಡಿ.
ನಿಮಗೆ ಈ ಮಾಹಿತಿ ಇಷ್ಟವಾಗಿದ್ರೆ ಲೈಕ್ ಮಾಡಿ ಶೇರ್ ಮಾಡಿ. ಹಾಗೆ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಈ ಮಾಹಿತಿ ತಲುಪುವಂತೆ ಶೇರ್ ಮಾಡಿ.

