Sunday, September 8, 2024

Latest Posts

Red alert: ಮುಂಗಾರಿನಲ್ಲಿ ಮಳೆಯ ಆರ್ಭಟ ಜೋರಾದ ಕಾರಣ ರೆಡ್ ಅಲರ್ಟ್​

- Advertisement -

ಜಿಲ್ಲಾ ಸುದ್ದಿಗಳು: ರಾಜ್ಯದಲ್ಲಿ ಮುಂಗಾರು ವರುಣಾರ್ಭಟ ಜೋರಾಗಿದ್ದು ಅನೇಕ ಜಿಲ್ಲೆಗಳು ತತ್ತರಿಸಿ ಹೋಗಿವೆ. ಮಳೆಯಿಂದಾಗಿ ಹಲವಾರು ಡ್ಯಾಂಗಳು ತುಂಬಿ ಹರಿಯುತ್ತಿವೆ. ಅನೇಕ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ಥವ್ಯಸ್ಥವಾಗಿದೆ. ರಸ್ತೆ, ಸೇತುವೆಗಳು ಜಲಾವೃತಗೊಂಡಿವೆ,ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ.

ಮಳೆಗಾಲದಲ್ಲಿ ಪರಿಸರ ಸೌಂದರ್ಯವನ್ನು ಸವಿಯಲು ಪ್ರವಾಸಕ್ಕೆ ಹೋಗುವವರ ಪ್ರವಾಸಿಗಳಿಗೆ ಟ್ರೆಕ್ಕಿಂಗ್ ಅನ್ನು ನಿಷೇಧಿಸಿದೆ ಪ್ರವಾಹದ ಭೀತಿ ಇರುವ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ. ಪಾಲಕರಿಗೆ ತಮ್ಮ ಮಕ್ಕಳನ್ನು ನದಿ, ಕೆರೆ, ಹಳ್ಳಗಳಿಗೆ ಕಳಿಸದಂತೆ  ಮುನ್ನೆಚ್ಚರಿಕೆ  ವಹಿಸಲು  ಮತ್ತು ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ೪ ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ, ಮೂಡಲಗಿ, ಸವದತ್ತಿ, ಯರಗಟ್ಟಿ, ನಿಪ್ಪಾಣಿ ತಾಲೂಕಿನ ಶಾಲೆಗಳಿಗೂ ರಜೆ ನೀಡಲಾಗಿದೆ. ಇಂದು ಸಂಜೆ ೪ಗಂಟೆಗೆ ಸಿಎಂ ಮಳೆ ಸಂಬಂಧ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ.

Krishna River : ಕೃಷ್ಣೆಯ ಒಡಲು ಸೇರುತ್ತಿದೆ ಧಾರಾಕಾರ ನೀರು…!

Siddaramaiah : ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂಧಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ

ಉಡುಪಿ : ಶಾಲೆ, ಪಿಯು ಕಾಲೇಜುಗಳಿಗೆ  ಜುಲೈ 26ರ ಬುಧವಾರ ರಜೆ ಘೋಷಣೆ

- Advertisement -

Latest Posts

Don't Miss