- Advertisement -
www.karnatakatv.net: ಕೇರಳದಲ್ಲಿ ಭಾರಿ ಮಳೆ ಮುಂದುವರೆದಿದ್ದು, ಮಳೆಯಿಂದಾಗಿ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ.
ಭಾರಿ ಮಳೆಯಿಂದ ಅರ್ಧ ರಾಜ್ಯವೆ ನೀರಿನಿಂದ ಮುಳುಗಿಹೊಗಿದ್ದು, ಇನ್ನೂ 2-3 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ, 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಹೇಳಿದ್ದಾರೆ. ಹೀಗಾಗಿ ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಅಲ್ಲದೆ ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತಗಳಿಗೆ ಹವಾಮಾನ ಇವಾಖೆ ಸೂಚಿಸಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ ಭಾರೀ ಮಳೆಯಾಗುತ್ತಿದ್ದು, ಜಲಾಶಯದ ಆಸುಪಾಸಿನ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವoತೆ ಸೂಚನೆ ನೀಡಲಾಗಿದೆ.
- Advertisement -