Saturday, July 27, 2024

Latest Posts

ಬಿ.ಕೆ.ಹರಿಪ್ರಸಾದ್ ಹೇಳಿಕೆ ವಿಚಾರ: ಅದಕ್ಕೆ ಜಗದೀಶ್ ಶೆಟ್ಟರ್ ಏನು ಮಾಡ್ಬೇಕು?

- Advertisement -

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿ.ಕೆ.ಹರಿಪ್ರಸಾದ್ ಅಸಮಾಧಾನದ ಬಗ್ಗೆ ಹೇಳಿಕೆ ನೀಡಿದ್ದಾರೆ.

ಒಂದು ಪಕ್ಷದಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಮುಖ್ಯಮಂತ್ರಿ, ರಾಜ್ಯದ ಅಧ್ಯಕ್ಷರು ಕಾಳಜಿ ತೆಗೆದುಕೊಳ್ಳುತ್ತಾರೆ. ಅವರನ್ನು ಕರೆದು ಮಾತನಾಡಿಸಿ ಸರಿ ಮಾಡುವ ಕೆಲಸ ಮಾಡುತ್ತಾರೆ ಎಂದರು. ಇನ್ನು ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಎಂಬ ವಿಚಾರದ ಬಗ್ಗೆ ಹೇಳಿಕೆ ಕೊಟ್ಟ ಅವರು, ರಾಜಕಾರಣ ಅಂದರೆ ಹಾಗೆ, ಏನು ಮಾಡಲಿಕ್ಕಾಗುವುದಿಲ್ಲ. ಒಬ್ಬೊಬ್ಬರ ಅಭಿಪ್ರಾಯ ಒಂದೊಂದು ರೀತಿ ಆಗಿರುತ್ತೆ. ಅಂತಹ ಯಾವುದೇ ಸಮಸ್ಯೆ ಇದ್ದರೂ ಸಿಎಂ ಸರಿಪಡಿಸುವ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ಈಡಿಗ ಸಮಾವೇಶ ರಾಜಕೀಯ ಪ್ರೇರಿತ ಎಂಬ ಹರಿಪ್ರಸಾದ್ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್,  ಅದಕ್ಕೆ ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಅಧ್ಯಕ್ಷರು ಉತ್ತರ ಕೊಡುತ್ತಾರೆ. ಅದಕ್ಕೆ ಜಗದೀಶ್ ಶೆಟ್ಟರ್ ಏನು ಮಾಡ್ಬೇಕು? ಎಂದು ಮರುಪ್ರಶ್ನಿಸಿದ್ದಾರೆ.

ಸಿಸಿ ಸರ್ಕಾರ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಶೆಟ್ಟರ್, ಬಿಜೆಪಿ 40% ಸರ್ಕಾರ ಎಂಬ ಕಾರಣದಿಂದ ಅಧಿಕಾರ ಕಳೆದುಕೊಂಡರು. ನಾವು ಭ್ರಷ್ಟಾಚಾರ ಮಾಡಿಲ್ಲ ಅಂತ ಸಾಬೀತುಪಡಿಸಲು ಅವರಿಗೆ ಆಗಲಿಲ್ಲ. ಕೋಟ್ಯಾಂತರ ರೂಪಾಯಿ ಬಿಜೆಪಿ ಅವರು ಖರ್ಚು ಮಾಡ್ತಾರಲ್ಲ, ಅವರೇನು ಸತ್ಯ ಹರಿಶ್ಚಂದ್ರರಾ? ಆ ದುಡ್ಡು ಎಲ್ಲಿಂದ ಬರುತ್ತೆ ? ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿ ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಬಿಜೆಪಿ ವಿರುದ್ಧ ಶೆಟ್ಟರ್ ಹರಿಹಾಯ್ದಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಜಯಶ್ರೀರಾಮ್ ಎಂದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್,  ಅದಕ್ಕೆ ರಾಜಕಾರಣ ಅಂತ ನಾನು ಹೇಳುತ್ತಿದ್ದೇನೆ. ರಾಜಕಾರಣದಲ್ಲಿ ಯಾವಾಗ ಏನಾಗುತ್ತೆ ಅನ್ನೋದು ಗೊತ್ತಾಗಲ್ಲ. ಕುಮಾರಸ್ವಾಮಿ ಅವರು ಕೂಡ ಪರಿವರ್ತನೆ ಆಗಿದ್ದಾರೆ ಎಂದರು.

ಲೋಕಸಭೆ ನಂತರ ಕಾಂಗ್ರೆಸ್ ಸರ್ಕಾರ ಇರೋದಿಲ್ಲ ಎಂಬ ವಿಪಕ್ಷ ನಾಯಕರ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಶೆಟ್ಟರ್,  ಬಿಜೆಪಿಯವರಿಗೆ ಅಧಿಕಾರಿ ಕಳೆದುಕೊಂಡ ಮೇಲೆ ಸಹಿಸಿಕೊಳ್ಳಲಾಗುತ್ತಿಲ್ಲ. 130 ಸ್ಥಾನ ಬರ್ತೀವಿ ಅಂತ 60 ಸ್ಥಾನಕ್ಕೆ ಹೇಳಿದ್ರು. ನೀರಿನಿಂದ ಹೊರಗೆ ಬಿದ್ದ ಮೀನು ಒದ್ದಾಡುವ ರೀತಿ ಒದ್ದಾಡ್ತಾ ಇದ್ದಾರೆ. ಸರ್ಕಾರ ಬೀಳುತ್ತೆ ಅಂತ ಬಿಜೆಪಿಯವರು ಭ್ರಮೆಯಲ್ಲಿದ್ದಾರೆ. ಮೊದಲು ಬಿಜೆಪಿಯವರು ತಮ್ಮ ಮನೆಯನ್ನು ಸರಿಪಡಿಸಿಕೊಳ್ಳಲಿ. ಯತ್ನಾಳ ಯಡಿಯೂರಪ್ಪ ಕುಟುಂಬವನ್ನು ಟೀಕೆ ಮಾಡುತ್ತಿದ್ದಾರೆ. ನನ್ನನ್ನು ಕಡೆಗಣಿಸಲು ಕಾರಣವನ್ನು ಯತ್ನಾಳ್ ಅವರೇ ಉತ್ತರ ಕೊಟ್ಟಿದ್ದಾರೆ.

ಬಿಜೆಪಿಯಲ್ಲಿ ಯಾರೇ ಅಧ್ಯಕ್ಷರು ಪ್ರತಿಪಕ್ಷ ನಾಯಕ ಆದರೂ ರಿಪೇರಿ ಮಾಡದಷ್ಟು ದುರಸ್ತಿಯಾಗಿದೆ. ಅದನ್ನ ರಿಪೇರಿ ಮಾಡಲು ಸಾಧ್ಯವೇ ಇಲ್ಲ ಅದರ ಪರಿಣಾಮ ಈಗ ನೋಡ್ತಾ ಇದ್ದೀವಿ. ಸರ್ಕಾರವನ್ನು ಇವರಿಗೆ ಎದುರಿಸಲು ಆಗ್ತಾ ಇಲ್ಲ. ವಿಧಾನ ಪರಿಷತ್ ನಲ್ಲಿ ಇದುವರೆಗೂ ಪ್ರತಿಪಕ್ಷದ ನಾಯಕನನ್ನು ಮಾಡಲು ಆಗ್ತಾ ಇಲ್ಲ. ಬಿಜೆಪಿ ಪಕ್ಷ ಅಧೋಗತಿಗೆ ಹೋಗುತ್ತಿದೆ ಎಂದು ಶೆಟ್ಟರ್ ಲೇವಡಿ ಮಾಡಿದ್ದಾರೆ.

ಹಮಾಸ್‌ ಜೊತೆ ಗುಂಡಿನ ಚಕಮಕಿ; ತಿಂಗಳ ಹಿಂದಷ್ಟೇ ನಿಶ್ಚಿತಾರ್ಥವಾಗಿದ್ದ ಭಾರತೀಯ ಮೂಲದ ಇಸ್ರೇಲಿ ಯೋಧ ಸಾವು

ಗಣ್ಯರ ಮಾಹಿತಿ ಮೊದಲೇ ಗೊತ್ತಿತ್ತು – ಸಿಎಂ ಭದ್ರತಾ ವಿಚಾರದಲ್ಲಿ ಎಡವಿದ್ರಾ ಧಾರವಾಡ ಪೊಲೀಸರು?

ಯತ್ನಾಳ್ ಆರೋಪಿಸಿದ ಅದೇ ಮೌಲ್ವಿ ಜೊತೆ ಗಡ್ಕರಿ ಫೋಟೋ ಬಿಡುಗಡೆ ಮಾಡಿದ ಕಾಂಗ್ರೆಸ್ ಮುಖಂಡ

- Advertisement -

Latest Posts

Don't Miss