www.karnatakatv.net: ದಸರಾ ಹಬ್ಬದ ನಂತರ ರಾಜ್ಯದಲ್ಲಿ ಹೇರಿರುವ ನಿರ್ಬಂಧಗಳನ್ನು ತೆಗೆದು ಹಾಕುವ ನಿರ್ಧಾರವನ್ನು ತೆಗೆದುಕೊಳ್ಳುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹೌದು.. ಹಬ್ಬಗಳ ನಿಮಿತ್ಯ ಕೊರೊನಾ ನಿಯಮಗಳನ್ನು ಕೊಂಚ ಬಿಗಿ ಇಡಲಾಗಿತ್ತು ಆದರೆ ದಸರಾ ಮುಗಿದ ನಂತರ ಕರ್ನಾಟಕದ ಗಡಿ ಭಾಗಗಳಲ್ಲಿ ಹೇರಿರುವ ನಿರ್ಬಂಧಗಳನ್ನು ತೆಗೆಯುವ ಬಗ್ಗೆ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ರು. ಕೇರಳ ಹಾಗೂ ಮಹಾರಾಷ್ಟ್ರಗಳಿಗೆ ಹೇರಿರುವ ಕೊರೊನಾ ನಿಯಮಗಳನ್ನು ಸಡಿಲಿಕೆಯ ಬಗ್ಗೆ ರಾಜ್ಯದ ತಜ್ಞರೊಂದಿಗೆ ಚರ್ಚೆ ನಡೆಸಿ ನಿರ್ಧರಿಸಲಾಗುವುದು ಹಾಗೇ ಗಡಿ ರಾಜ್ಯಗಳಲ್ಲಿ ಕೊರೊನಾ ಕೇಸುಗಳ ಬಗ್ಗೆ ಅರಿತು ಸದ್ಯದಲ್ಲೆ ಕೊರೊನಾ ನಿಯಮವನ್ನು ಸಡಿಲಿಕೆಯ ಬಗ್ಗೆ ಮಾಹಿತಿಯನ್ನು ಕೊಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಕೇರಳ ಮತ್ತು ಮಹಾರಾಷ್ಟ್ರ ಗಳಲ್ಲಿ ಕೊರೊನಾ ಕೇಸುಗ್ಳು ಅಧಿಕವಾಗಿದ್ದು ಅಲ್ಲಿ ಕಟ್ಟುನಿಟ್ಟಿನ ನಿರ್ಭಂದವನ್ನು ಹೇರಲಾಗಿತ್ತು ಆದರೆ ಈಗ ಕೊರೊನಾ ಪಾಸಿಟಿವ್ ಗಳ ಕೇಸುಗಳು ಕಡಿಮೆಯಾಗುತ್ತಿದ್ದು, ಲಸಿಕೆ ಹಾಕಿಸಿರುವವರ ಪ್ರಮಾಣದ ಬಗ್ಗೆ ತಿಳಿದುಕೊಂಡು ರಾಜ್ಯದ ಗಡಿಯಲ್ಲಿ ಹೇರಿರುವ ನಿರ್ಬಂಧಗಳನ್ನು ಸಡಿಲಿಕೆ ಮಾಡುವ ಕುರಿತು ದಸರಾ ನಂತರ ತಜ್ಞರ ಸಭೆಯಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ಹೇಳಿದರು.
ಒಮ್ಮೆ ಕೋವ್ಯಾಕ್ಸಿನ್ ಲಸಿಕೆಗೆ ಅನುಮೋದನೆ ಸಿಕ್ಕ ನಂತರ ಕೇಂದ್ರ ಸರ್ಕಾರದ ಮಾರ್ಗಸೂಚಿಯ ಅನುಸಾರ ಮಕ್ಕಳಿಗೆ ಕೊವಿಡ್ ಲಸಿಕೆ ನೀಡುವ ಅಭಿಯಾನ ನಡೆಸಲಾಗುವುದು. ರಾಜ್ಯದಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡಿರುವವರ ಪ್ರಮಾಣ ಹೆಚ್ಚಾಗಿರುವುದು ಸಮಾಧಾನಕರ ಸಂಗತಿ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕರಾವಳಿ ಭಾಗದಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಸಮಾಜದಲ್ಲಿ ಹಲವಾರು ಭಾವನೆಗಳಿವೆ ಅದಕ್ಕೆ ಧಕ್ಕೆ ಆಗದ ಹಾಗೇ ನಾವು ನಡೆದುಕೊಳ್ಳಬೇಕಾಗುತ್ತದೆ. ಕಾನೂನನ್ನು ಕಾಪಾಡುವುದರೊಂದಿಗೆ ಸಾಮಾಜಿಕ ಸಾಮರಸ್ಯ ಕಾಪಾಡೋದು ಸರ್ಕಾರದ ಕರ್ತವ್ಯ ಎಂದು ಬೊಮ್ಮಾಯಿ ಹೇಳಿದ್ದಾರೆ.