Thursday, July 10, 2025

Latest Posts

ರಾಜಕಾರಣದಲ್ಲಿ ಧರ್ಮ ಇರಬೇಕು. ಧರ್ಮದಲ್ಲಿ ರಾಜಕಾರಣ ಇರಬಾರದು: ಡಿಸಿಎಂ ಡಿ.ಕೆ.ಶಿವಕುಮಾರ್

- Advertisement -

Political News: ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸುಮನಹಳ್ಳಿ ಸರ್ಕಲ್‌ ಬಳಿಯ ಡಾ. ಬಾಬು ಜಗಜೀವನರಾಂ ಭವನದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ನಾಯಕರು ಭಾಗವಹಿಸಿದ್ದರು.  ಈ ವೇಳೆ ಮಾತನಾಡಿದ ಡಿಕೆಶಿ, ಕೆಂಪೇಗೌಡರ ಜನ್ಮದಿನ ಒಂದು ಐತಿಹಾಸಿಕ ಸಮಾರಂಭ. ಬೆಂಗಳೂರಿಗೆ ಅಪಾರ ಕೊಡುಗೆಗಳನ್ನು ನೀಡಿದ ಮಹಾಪುರುಷ ಕೆಂಪೇಗೌಡರ ಜಯಂತಿಯನ್ನು ಅರ್ಥಪೂರ್ಣವಾಗಿ, ಅತ್ಯಂತ ಗೌರವದಿಂದ ಆಚರಿಸಲಾಗುತ್ತದೆ. ಅಂದು ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಂದು ವಿಶ್ವಮಟ್ಟದಲ್ಲಿ ಬೆಳೆಯುತ್ತಿದೆ. ಅವರ ಕೊಡುಗೆಗಳನ್ನು ಸ್ಮರಿಸಲು ನಮ್ಮ ಸರ್ಕಾರ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಟ್ಟಿದೆ. ಕೆಂಪೇಗೌಡರ ಹೆಸರನ್ನು ಉಳಿಸಲು ನಮ್ಮ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ ಎಂದಿದ್ದಾರೆ.

ರಾಜಕಾರಣದಲ್ಲಿ ಧರ್ಮ ಇರಬೇಕು. ಧರ್ಮದಲ್ಲಿ ರಾಜಕಾರಣ ಇರಬಾರದು ಎಂಬುವುದು ನನ್ನ ಆಶಯ. ಬೆಂಗಳೂರು ನಗರವನ್ನು ಕಟ್ಟಿರುವ ಕೆಂಪೇಗೌಡರು ಕರ್ನಾಟಕದ ಆಸ್ತಿ ಇದ್ದಂತೆ.

ಬೆಂಗಳೂರಿನ ಅಭಿವೃದ್ಧಿಗಾಗಿ ನಮ್ಮ ಸರ್ಕಾರವು 17 ಸಾವಿರ ಕೋಟಿ ರೂ. ವೆಚ್ಚದಲ್ಲಿ 40 ಕಿ.ಮೀ. ಉದ್ದದ ಟನಲ್ ರಸ್ತೆ ನಿರ್ಮಿಸುತ್ತಿದೆ. ಹೆಬ್ಬಾಳ ಫ್ಲೈಓವರ್ ಕಾಮಗಾರಿ ಸೇರಿದಂತೆ ಬೆಂಗಳೂರಿನ ಅಭಿವೃದ್ಧಿಗಾಗಿ ಮುಂದಿನ 3-4 ವರ್ಷದಲ್ಲಿ 1 ಲಕ್ಷ ಕೋಟಿ ರೂ.ನ್ನು ನಾವು ಮೀಸಲಿಟ್ಟಿದ್ದೇವೆ. ಬೆಂಗಳೂರಿನ ನಾಗರಿಕರ ಅನುಕೂಲಕ್ಕಾಗಿ ಮನೆ ಬಾಗಿಲಿಗೆ ನಂಬಿಕೆ ನಕ್ಷೆ, ಇ- ಖಾತಾ ಒದಗಿಸುವ ವ್ಯವಸ್ಥೆ ರೂಪಿಸಲಾಗಿದೆ ಎಂದು ಡಿಕೆಶಿ ಹೇಳಿದ್ದಾರೆ.

ದೇವರು ವರವನ್ನೂ ಕೊಡುವುದಿಲ್ಲ, ಶಾಪವನ್ನೂ ಕೊಡುವುದಿಲ್ಲ. ಅವಕಾಶಗಳನ್ನು ಮಾತ್ರ ಕೊಡುತ್ತಾನೆ. ಸಿಕ್ಕ ಅವಕಾಶದಲ್ಲಿ ಸಾಕ್ಷಿಗುಡ್ಡೆಯನ್ನು ಬಿಟ್ಟುಹೋಗುವುದು ಮುಖ್ಯ. ರಾಜ್ಯದ ಹೃದಯ ಭಾಗವಾಗಿರುವ ಬೆಂಗಳೂರನ್ನು ನಾಡಪ್ರಭು ಕೆಂಪೇಗೌಡರು ಕಟ್ಟಿದರು. ಕೆಂಗಲ್‌ ಹನುಮಂತಯ್ಯನವರು ವಿಧಾನಸೌಧವನ್ನು ಕಟ್ಟಿದರು. ಎಸ್‌.ಎಂ. ಕೃಷ್ಣ ಅವರು ವಿಕಾಸಸೌಧವನ್ನು ಕಟ್ಟಿ, ಸಾಕ್ಷಿಗುಡ್ಡೆಯನ್ನು ಬಿಟ್ಟು ಹೋಗಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

- Advertisement -

Latest Posts

Don't Miss