www.karnatakatv.net : ಗುಂಡ್ಲುಪೇಟೆ: ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುವ ಅರಣ್ಯ ಇಲಾಖೆಯ 205 ತಾತ್ಕಾಲಿಕ ದಿನಗೂಲಿ ನೌಕರರ ಸ್ಥಳಾಂತರಕ್ಕೆ ವನ್ಯಜೀವಿ ತಜ್ಞ ಜೋಸೆಫ್ ಹೂವರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಬಂಡೀಪುರದ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಕಾಏಕಿ 205 ದಿನಗೂಲಿ ನೌಕರರನ್ನು 30 ಕಿ.ಮೀ ದೂರದಲ್ಲಿರುವ ಮತ್ತೊಂದು ವಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಸ್ಥಳಾಂತರದಿಂದಾಗಿ ದಿನಗೂಲಿನ ನೌಕರರಿಗೆ ಅನಾನುಕೂಲವಾಗಲಿದೆ. ಅರಣ್ಯ ಇಲಾಖೆ ಕೂಡ ಅಗತ್ಯವಾದ ವಸ್ತುಗಳನ್ನು ಕೂಡ ನೀಡಿಲ್ಲ. ಹಲವು ಸಮಸ್ಯೆಗಳನ್ನು ಎದುರಿಸುತ್ತಿರುವ ದಿನಗೂಲಿ ನೌಕರರನ್ನು ಸ್ಥಳಾಂತರಿಸುವುದರಿಂದ ಜೀವನ ನಿರ್ವಹಣೆ ಕಷ್ಟವಾಗಲಿದೆ ಎಂದು ಜೋಸೆಫ್ ಹೂವರ್ ಹೇಳಿದ್ದಾರೆ.
ಕರ್ನಾಟಕ ಟಿವಿ ಗುಂಡ್ಲುಪೇಟೆ




