Political News: ಪತ್ರಿಕೋದ್ಯಮ ಕ್ಷೇತ್ರದಲ್ಲಿ 40 ವರ್ಷ ಕೆಲಸ ಮಾಡಿದ್ದ ಖ್ಯಾತ ಪತ್ರಕರ್ತ ಎಸ್.ಕೆ.ಶ್ಯಾಮಸುಂದರ್(72) ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಸಿ, ಇಂದು ನಿಧನರಾಗಿದ್ದಾರೆ.
ಬೆಂಗಳೂರಿನ ಬನಶಂಕರಿಯ ದಿಗ್ವೀಶ್ ಆಸ್ಪತ್ರೆಯಲ್ಲಿ ಶ್ಯಾಮಸುಂದರ್ ಇಷ್ಟು ದಿನ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಇಂದು ಮೃತಪಟ್ಟಿದ್ದಾರೆ. ಅಧಿಕ ರಕ್ತದೊತ್ತಡ ಕೊರತೆಯಿಂದ ಇತ್ತೀಚಿನ ದಿನಗಳಲ್ಲಿ ಅವರು ಕೋಮಾಗೆ ಹೋಗಿದ್ದರು. ಬಳಿಕ ಕೊಂಚ ಸುಧಾರಿದರು ಎನ್ನುವಷ್ಟರಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಇವು ಟಿವಿ ಮೀಡಿಯಾ, ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಲ್ಲದೇ, ಡಿಜಿಟಲ್ ಮೀಡಿಯಾದ ಮೊದಲ ಎಡಿಟರ್ ಎನ್ನಿಸಿಕೊಂಡವರು. ಹಾಗಾಗಿಯೇ ಇವರನ್ನು ಡಿಜಿಟಲ್ ಮೀಡಿಯಾ ಭೀಷ್ಮ ಅಂತಲೇ ಕರೆಯುತ್ತಾರೆ.
ಹಿರಿಯ ಪತ್ರಕರ್ತ ಎಸ್.ಕೆ. ಶ್ಯಾಮಸುಂದರ್ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಬರಹವನ್ನೇ ಬದುಕಾಗಿಸಿಕೊಂಡಿದ್ದ ಶ್ಯಾಮಸುಂದರ್ ಅವರು ಸುದೀರ್ಘಕಾಲ ಪತ್ರಕರ್ತರಾಗಿ ದುಡಿದವರು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಶ್ಯಾಮಸುಂದರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.