Thursday, January 23, 2025

Latest Posts

ಜಾಮೀನಿಗಾಗಿ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ

- Advertisement -

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ​ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಸೇರಿ ಬರೋಬ್ಬರಿ 72 ದಿನಗಳಾಗಿವೆ. ಈ ಕೊಲೆ ಕೇಸ್​​ನಲ್ಲಿ ದರ್ಶನ್ ಎ2 ಆರೋಪಿಯಾಗಿದ್ರೆ, ಪವಿತ್ರಾಗೌಡ ಎ1 ಆರೋಪಿಯಾಗಿದ್ದಾರೆ. ಇದೀಗ ಪವಿತ್ರಾಗೌಡ ಅವರು ಜಾಮೀನಿಗಾಗಿ ಅರ್ಜಿಸಲ್ಲಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆಯಾದ ಸ್ಥಳದಲ್ಲಿ ಪವಿತ್ರಾ ಗೌಡ ಇದ್ರೂ ಎನ್ನುವ ಕುರಿತು ಪೊಲೀಸರಿಗೆ ಸಾಕ್ಷಿ ಸಿಕ್ಕಿತ್ತು. ಇದೇ ಹಿನ್ನಲೆ ಜೂ.11ರಂದು ಪವಿತ್ರಾ ಅವನ್ನರು ಬೆಂಗಳೂರಿನ ರಾಜರಾಜೇಶ್ವರ ನಗರ ಪೊಲೀಸರು ಬಂಧಿಸಿದ್ದರು. ಆಗಸ್ಟ್ 14ರಂದು ವಿಚಾರಣೆಗೆ ಹಾಜರಾಗಿದ್ದ ಪವಿತ್ರಾರ ನ್ಯಾಯಾಂಗ ಬಂಧನದ ಅವಧಿಯನ್ನು ಆ.28ರವರೆಗೆ ವಿಸ್ತರಣೆಯಾಗಿದೆ.

ಸೋಮವಾರ ನಟಿ ಪವಿತ್ರಾ ಪರ ವಕೀಲರು ಬೆಂಗಳೂರಿನ ಸಿಹೆಚ್​ 57ನೇ ಕೋರ್ಟ್​ಗೆ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ವಿಚಾರಣೆಯನ್ನು ಆ.22ಕ್ಕೆ ಮುಂದೂಡಿದೆ. ಅಲ್ಲದೇ, ಕೋರ್ಟ್ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಆಕ್ಷೇಪಣೆಯನ್ನು ಸಲ್ಲಿಕೆ ಮಾಡಬೇಕಿದೆ.

ಇನ್ನೂ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರ ಗೊಳಿಸಿದೆ. ಕಳೆದ ವಾರ ಪೊಲೀಸರಿಗೆ ಈ ಪ್ರಕರಣದಲ್ಲಿ ಪ್ರಯೋಗಾಲದ ವರದಿ ಸಿಕ್ಕಿತ್ತು. ಕೆಲವೇ ದಿನಗಳಲ್ಲಿ ಚಾರ್ಜ್ ಶೀಟ್ ಸಲ್ಲಿಕೆಗೆ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಇದ್ರ ನಡುವೆಯೇ ಪವಿತ್ರಾ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿರೋದು ಕುತೂಹಲ ಮೂಡಿಸಿದೆ.
ನಟಿ ಪವಿತ್ರಾ ಗೌಡ ಪರ ವಕೀಲರು ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆಯನ್ನು ಕೋರ್ಟ್ ಆಗಸ್ಟ್ 22ಕ್ಕೆ ಮುಂದೂಡಿದೆ. ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸುವ ಮುನ್ನವೇ ಪವಿತ್ರಾ ಗೌಡಗೆ ಜಾಮೀನು ಸಿಗುತ್ತಾ ಅನ್ನೋದು ಕುತೂಹಲದ ಸಂಗತಿಯಾಗಿದೆ. ಆದ್ರೆ, ಪವಿತ್ರಾ ಗೌಡ ಅರ್ಜಿ ಸಲ್ಲಿಸಿದರೂ ಕೂಡ ನಟ ದರ್ಶನ್​ ಮಾತ್ರ ಯಾಕೆ ಇನ್ನೂ ಜಾಮೀನು ಕೋರಿ ಅರ್ಜಿ ಸಲ್ಲಿಸಿಲ್ಲ ಅನ್ನೋದೇ ಎಲ್ಲರೂ ಆಶ್ಚರ್ಯ ಪಡಲು ಕಾರಣವಾಗಿದೆ.

-ಸ್ವಾತಿ.ಎಸ್.

- Advertisement -

Latest Posts

Don't Miss